ನವದೆಹಲಿ:ಟೈಲರ್​ ಕನ್ಹಯ್ಯ ಲಾಲ್​ ಹತ್ಯೆಗೂ ಮುನ್ನವೇ ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಕತ್ತು ಸೀಳಿ ದುಷ್ಕರ್ಮಿಗಳು ಕೊಂದಿರುವ ಪ್ರಕರಣ ಈಗ ಎನ್​​ಐಎ ಅಂಗಳಕ್ಕೆ ತಲುಪಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪ್ರಕರಣವನ್ನು ಎನ್​ಐಎಗೆ ಒಪ್ಪಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.
MHA has handed over the investigation of the case relating to the barbaric killing of Shri Umesh Kolhe in Amravati Maharashtra on 21st June to NIA.
The conspiracy behind the killing, involvement of organisations and international linkages would be thoroughly investigated.
— गृहमंत्री कार्यालय, HMO India (@HMOIndia)July 2, 2022

ಕನ್ಹಯ್ಯ ಲಾಲ್ ಕೊಲೆಯಾಗುವ ಒಂದು ವಾರದ ಮೊದಲೇ ಅಂದರೆ, ಜೂ.21ರಂದು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ 54 ವರ್ಷದ ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದರಾವ್ ಅವರು ಅಂದು ರಾತ್ರಿ ಅಂಗಡಿ ಬಾಗಿಲು ಹಾಕಿ ಹೊರಡುವ ವೇಳೆ ದುಷ್ಕರ್ಮಿಗಳು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಇದನ್ನು ಹಂತಕರು ವಿಡಿಯೋ ಮಾಡಿಕೊಂಡಿದ್ದರು. ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಮುಸ್ಲಿಮರು ಸದಸ್ಯರಾಗಿದ್ದ ವಾಟ್ಸಪ್ ಗ್ರೂಪ್ ನಲ್ಲೂ ಷೇರ್ ಆಗಿತ್ತು. ನೋಡ ನೋಡುತ್ತಿದ್ದಂತೆ ಹಂತಕರ ಕೃತ್ಯ ಎಲ್ಲೆಡೆ ವ್ಯಾಪಿಸಿ, ಕೊನೆಗೆ ಹತ್ಯೆಯಾದ ಕೊಲ್ಹೆ ಅವರ ಪುತ್ರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುದಸಿರ್ ಅಹಮದ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24) ಶೋಯಬ್ ಖಾನ್ (22) ಮತ್ತು ಅತಿಬ್ ರಶೀದ್ (22) ಎಂಬುವವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.(ಏಜೆನ್ಸೀಸ್​)
ಮತ್ತೊಮ್ಮೆ ಶಿಷ್ಟಾಚಾರ ಮರೆತ ತೆಲಂಗಾಣ ಸಿಎಂ: ರಾಜ್ಯಕ್ಕೆ ಪ್ರಧಾನಿ ಆಗಮಿಸಿದರೂ ಸ್ವಾಗತಕ್ಕೆ ಬಾರದ ಕೆಸಿಆರ್​!

ಮಾಜಿ ಸಿಎಂ, ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
