ಲಖನೌ:ಸ್ವಂತ ಊರು ಸೇರಲು ಸೈಕಲ್ ಮೂಲಕ ಹೊರಟ ಛತ್ತೀಸಗಢದ ವಲಸೆ ಕಾರ್ಮಿಕ ಹಾಗೂ ಆತನ ಪತ್ನಿ ಅಪಘಾತಕ್ಕೀಡಾಗಿ ಗುರುವಾರ ಮೃತಪಟ್ಟಿದ್ದಾರೆ.ಕೃಷ್ಣಾ ಸಾಹು (45) ಹಾಗೂ ಆತನ ಪತ್ನಿ ಪ್ರಮೀಳಾ (40)ಮೃತರು.ಮೂಲತಃ ಛತ್ತೀಸಗಢದ ಕೃಷ್ಣಾ ಲಖನೌನಲ್ಲಿ ದಿನಗೂಲಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ಅಲ್ಲಿಯೇ ಕುಟುಂಬದೊಂದಿಗೆ ವಾಸವಾಗಿದ್ದ.ಗುರುವಾರ ಮಧ್ಯರಾತ್ರಿ 1.30 ಕ್ಕೆ ಬೈಪಾಸ್ ರಸ್ತೆಯ ಶಾಹೀದ್ ಪಥದಲ್ಲಿ ಅಪಘಾತ ಸಂಭವಿಸಿದ್ದಾಗಿ ಲಖನೌ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪಂಜಾಬ್​ ಬಳಿ ಭಾರತೀಯ ವಾಯುಪಡೆ ಯುದ್ಧವಿಮಾನ ಪತನವೇಗವಾಗಿ ಚಲಿಸುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ದಂಪತಿಯ ಐದು ವರ್ಷದೊಳಗಿನ ಇಬ್ಬರು ಮಕ್ಕಳು ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ.ದಂಪತಿಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ಡಿಕ್ಕಿ ಹೊಡೆದ ವಾಹನ ಹಾಗೂ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಲಾಕ್​ಡೌನ್​ನಿಂದಾಗಿ ಕೆಲಸ, ಊಟ, ಹಣ ಹಾಗೂ ಆಶ್ರಯವಿಲ್ಲದೇ ಹತಾಶರಾಗಿದ್ದ ಕಾರ್ಮಿಕರು ಸಾವಿರಾರು ಕಿ.ಮೀ. ದೂರದ ತಮ್ಮ ಊರುಗಳಿಗೆ ಸೈಕಲ್ ಅಥವಾ ಕಾಲ್ನಡಿಗೆ ಮೂಲಕ ತೆರಳುತ್ತಿದ್ದಾರೆ ಎನ್ನಲಾಗಿದೆ.ದೆಹಲಿಯಂತಹ ದೊಡ್ಡ ನಗರಗಳಿಂದ ವಲಸೆ ಕಾರ್ಮಿಕರು ತಮ್ಮ ಮನೆಗೆ ಹಿಂದಿರುಗಲು ಶ್ರಮ ಪಡಬೇಕಾಗಿಲ್ಲ, ವಲಸಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.
ತವರೂರಿಗೆ ಬರುವ ಆತುರದಲ್ಲಿದ್ದವರು ಕ್ವಾರಂಟೈನ್​​ಗೆ…!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
