ಅಹಮದಾಬಾದ್​:ಬಿಹಾರ ಮತ್ತು ಉತ್ತರ ಪ್ರದೇಶಗಳಿಗೆ ತೆರಳುತ್ತಿದ್ದ ಶ್ರಮಿಕ್​ ಸ್ಪೆಶಲ್​ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಆಯಾ ರಾಜ್ಯ ಸರ್ಕಾರಗಳ ಮನವಿ ಮೇರೆಗೆ ಅಧಿಕಾರಿಗಳು ಕೈಗೊಂಡಿರುವ ಈ ನಿರ್ಧಾರ ವಲಸೆ ಕಾರ್ಮಿಕರನ್ನು ಕೆರಳಿಸಿದೆ.

ಗುಜರಾತ್​ನ ರಾಜ್​ಕೋಟ್​ ಬಳಿಯ ಶಾಪಾರ್​ ಕೈಗಾರಿಕಾ ಪ್ರದೇಶದಲ್ಲಿರುವ ವಲಸೆ ಕಾರ್ಮಿಕರು ದಾಂಧಲೆ ಎಬ್ಬಿಸಿ, ರಸ್ತೆ ಬದಿಗಳಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಮೇಲೆ ಕಲ್ಲು ತೂರಿದ್ದಲ್ಲದೆ, ಅವುಗಳನ್ನು ಉರುಳಿಸಿ ಜಖಂಗೊಳಿಸಿದ್ದಾರೆ.
ವಲಸೆ ಕಾರ್ಮಿಕರ ದಾಂಧಲೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್​ಕೋಟ್​ ಎಸ್​ಪಿ (ಗ್ರಾಮಾಂತರ) ಬಲರಾಮ್​ ಮೀನಾ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಅಪಹರಣಕಾರರಿಂದ ಮಗುವನ್ನು ರಕ್ಷಿಸಿದರೂ ಕರೊನಾ ತೆಕ್ಕೆಯಿಂದ ಕಾಪಾಡಲಾಗಲಿಲ್ಲ..!
ಗಡಿಯಲ್ಲಿ ಗಲಾಟೆ:ದೂರ ದೂರದಿಂದ ಬಂದಿರುವ ತಮಗೆ ಉತ್ತರ ಪ್ರದೇಶಕ್ಕೆ ಪ್ರವೇಶಿಸದಂತೆ ಬ್ಯಾರಿಕೇಡ್​ಗಳನ್ನು ಅಳವಡಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವಲಸೆ ಕಾರ್ಮಿಕರು, ಬ್ಯಾರಿಕೇಡ್​ಗಳನ್ನು ಮುರಿದು ಉತ್ತರ ಪ್ರದೇಶವನ್ನು ಪ್ರವೇಶಿಸಿದ್ದಾರೆ.ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಗಡಿ ರೇವಾ ಬಳಿಯ ಚಾಕ್​ಘಾಟ್​ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಪ್ರವೇಶಿಸದಂತೆ ತಡೆಗೋಡೆಗಳನ್ನು ನಿರ್ಮಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿದ್ದ ವಲಸೆ ಕಾರ್ಮಿಕರು ಅವನ್ನು ಮುರಿದು ಉತ್ತರ ಪ್ರದೇಶವನ್ನು ಪ್ರವೇಶಿಸಿದರು. ಅಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಮೂಕಪ್ರೇಕ್ಷಕರಾಗಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
#WATCHMigrant workers break police barricades at Uttar Pradesh-Madhya Pradesh border in Chakghat area of Rewa to enter into Uttar Pradesh.pic.twitter.com/GeerWaWzem
— ANI (@ANI)May 17, 2020

ಲಾಕ್​ಡೌನ್​ ಕಾಲ ಮುಗೀತು, ಕರೊನಾ ಕಟ್ಟಿ ಹಾಕುತ್ತಾ ಕಂಟೇನ್​ಮೆಂಟ್​?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 6 =
Remember me
