ನವದೆಹಲಿ: ಏಪ್ರಿಲ್​ 20ರಿಂದ ಗ್ರಾಮೀಣ ಪ್ರದೇಶದಲ್ಲಿ ಹಲವು ಆರ್ಥಿಕ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಅನುಮತಿಸಿದೆ. ಆ ಮೂಲಕ ದಿನಗೂಲಿ ಕಾರ್ಮಿಕರು ಹಾಗೂ ನಿರಾಶ್ರಿತ ಶಿಬಿರಗಳಲ್ಲಿ ನೆಲೆ ಕಂಡುಕೊಂಡವರಿಗೆ ದೊಡ್ಡ ರಿಲೀಫ್​ ನೀಡಿದೆ.
ಅವರವರ ಕೌಶಲ್ಯಕ್ಕೆ ತಕ್ಕಂತೆ ಕೆಲಸದಲ್ಲಿ ತೊಡಗಿಕೊಳ್ಳಬಹುದು. ಒಂದು ವೇಳೆ ತಾವಿರುವ ರಾಜ್ಯದಲ್ಲಿಯೇ ಬೇರೆ ಸ್ಥಳಗಳಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದಲ್ಲಿ, ಅಲ್ಲಿಗೆ ತೆರಳಿ ಕೆಲಸ ಮುಂದುವರಿಸಬಹುದು. ಇದಕ್ಕಾಗಿ ನೋಡಲ್​ ಅಧಿಕಾರಿಗಳ ಬಳಿ ತಾವು ಮಾಡುತ್ತಿದ್ದ ಕೆಲಸ ಹಾಗೂ ಕೌಶಲದ ಬಗ್ಗೆ ನೋಂದಣಿ ಮಾಡಿಕೊಳ್ಳಬೇಕು. ಸ್ಥಳೀಯವಾಗಿ ಉದ್ಯೋಗ ಲಭ್ಯವಿದ್ದಲ್ಲಿ ತೊಡಗಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳ ಹಾಗೂ ಪ್ರಸ್ತುತ ಅವರಿರುವ ಸ್ಥಳ ಒಂದೇ ರಾಜ್ಯಕ್ಕೆ ಸೇರಿದ್ದಾಗಿದ್ದಲ್ಲಿ ಕಾರ್ಮಿಕರನ್ನು ಅಲ್ಲಿಗೆ ಕರೆದೊಯ್ಯಬಹುದು. ಅದಕ್ಕೂ ಮುನ್ನ ಆರೋಗ್ಯ ತಪಾಸಣೆ ನಡೆಸಿ, ಸೋಂಕಿಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಸೋಮವಾರದಿಂದ ಗ್ರಾಮೀಣ ಪ್ರದೇಶದ ಕೈಗಾರಿಕೆ, ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆ, ಕಟ್ಟಡ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಪರವಾನಗಿ ನೀಡಿದೆ.ಜತೆಗೆ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ತುರ್ತು ಸೇವೆ ಸಲ್ಲಿಸುವ ಖಾಸಗಿ ವಾಹನಗಳು, ಅಗತ್ಯ ಸೇವೆಗಳನ್ನು ಒದಗಿಸುವ
ಇ-ಕಾಮರ್ಸ್​ ಕಂಪನಿಗಳು, ಕೊರಿಯರ್​ ಸರ್ವೀಸ್​, ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಮೊದಲಾದವುಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದೆ. ಗ್ರಾಮೀಣ ಪ್ರದೇಶ ಮಾತ್ರವಲ್ಲದೆ, ಕಂಟೇನ್​ಮೆಂಟ್​ ಝೋನ್​ ವ್ಯಾಪ್ತಿಯಿಂದ ಹೊರತಾದ ಪ್ರದೇಶಗಳಲ್ಲೂ ಈ ಚಟುವಟಿಕೆಗಳಿಗೆ ಅವಕಾಶವಿದೆ.
ಅಂತಾರಾಜ್ಯ ವಲಸೆಗೆ ಅವಕಾಶವಿಲ್ಲ: ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಿದ್ದರೂ ವಲಸೆ ಕಾರ್ಮಿಕರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆರಳಲು ಅವಕಾಶವಿಲ್ಲವೆಂದು ಕೇಂದ್ರ ಸ್ಪಷ್ಟಪಡಿಸಿದೆ.
ಲಾಕ್​​ಡೌನ್​ ಆಗಿ ಮನೆಯಲ್ಲಿದ್ದವರಿಗೆ ನಿಮ್ಮೂರಲ್ಲೇ ಉದ್ಯೋಗಾವಕಾಶ ಎಲ್ಲ ಜಿಲ್ಲೆಗಳಲ್ಲೂ ಬೇಕಾಗಿದ್ದಾರೆ ತಾಂತ್ರಿಕ ಸಹಾಯಕರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × one =
Remember me
