ಗುವಾಹಟಿ:61 ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆದಿರುವ ಅಸ್ಸಾಂ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇವರ ವಿರುದ್ಧ ರೈಲ್ವೆ ಇಲಾಖೆಯೂ ಪ್ರತ್ಯೇಕವಾಗಿ ಕೇಸ್ ದಾಖಲಿಸಿದೆ.
ಲೋಕಮಾನ್ಯ ತಿಲಕ್​ ಶ್ರಮಿಕ್​ ವಿಶೇಷ ರೈಲಿನಲ್ಲಿ ಮುಂಬೈನಿಂದ ದಿಬ್ರುಗಢ್​ಗೆ ಬರುತ್ತಿದ್ದ ಇವರು ಹೊಜೈ ರೈಲ್ವೆ ನಿಲ್ದಾಣದ ಸಮೀಪ ಮಧ್ಯರಾತ್ರಿ ರೈಲಿನ ತುರ್ತು ಸರಪಳಿ ಎಳೆದಿದ್ದರು. ಯಾವುದೇ ಎಮರ್ಜನ್ಸಿ ಇರಲಿಲ್ಲ. ಬದಲಿಗೆ ಕ್ವಾರಂಟೈನ್​ನಿಂದ ತಪ್ಪಿಸಿಕೊಳ್ಳುವ ಸಲುವಾಗಿ ರೈಲಿನಿಂದ ಜಿಗಿದು ಪರಾರಿಯಾಗಲು ಈ ಉಪಾಯ ಮಾಡಿದ್ದರು.ಮುಂಬೈನಿಂದ ಬಂದವರಲ್ಲಿ ಬಹುತೇಕ ಮಂದಿಯಲ್ಲಿ ಕರೊನಾ ಕಾಣಿಸಿಕೊಳ್ಳುತ್ತಿದ್ದರೂ ಈ ವಲಸೆ ಕಾರ್ಮಿಕರು ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ರಾತ್ರಿ ತುರ್ತು ಸರಪಳಿಯನ್ನು ಎಳೆದರೂ ಎಲ್ಲರಿಗೂ ಪರಾರಿಯಾಗಲು ಸಾಧ್ಯವಾಗಲಿಲ್ಲ. ಅದರಲ್ಲಿ ಓರ್ವ ತಪ್ಪಿಸಿಕೊಂಡಿದ್ದ. ಅವನನ್ನು ಮರುದಿನ ಬೆಳಗ್ಗೆ ಮಾರ್ಕೆಟ್​​ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಯ ಬಳಿಗೆ ಹೊಜೈ ರೈಲ್ವೆ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಪೊಲೀಸರು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. (ಏಜೆನ್ಸೀಸ್​)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three × four =
Remember me
