ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಪುಲ್ವಾಮಾ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳೊಂದಿಗಿನ ಎನ್​ಕೌಂಟರ್​ನಲ್ಲಿ ಒಬ್ಬ ಉಗ್ರ ಹತಗನಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಪಾಂಪೋರ್​ ಎಂಬಲ್ಲಿನ ಲಾಲ್​ಪೋರಾದಲ್ಲಿ ಗುರುವಾರ ಸಂಜೆ ಭದ್ರತಾ ಪಡೆಗಳು ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿವೆ. ಶೋಧ ಕಾರ್ಯ ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲಿಂದ ಪರಾರಿಯಾಗುವುದಕ್ಕೂ ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ:FACT Check | ಮಸೀದಿ ಧ್ವನಿವರ್ಧಕ ತೆರವಿಗೆ ಆದೇಶಿಸಿಲ್ಲ- ಪೊಲೀಸ್ ಇಲಾಖೆ ಯೂ-ಟರ್ನ್​!
ಇದೇ ವೇಳೆ ಯೋಧರು ಪ್ರತಿದಾಳಿ ನಡೆಸಿದ್ದು, ಅದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡೇ ಭದ್ರತಾ ಪಡೆ ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಗೊತ್ತಿಲ್ಲ, ಪರ್ಸಂಟೇಜ್ ಲೆಕ್ಕಕ್ಕೆ ಇನ್ನೂ ಸಿಕ್ಕಿಲ್ಲ ಮುಕ್ತಿ ಎಂದ ರೇವಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
