ಶ್ರೀನಗರ:ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.ಪೊಲೀಸರ ತಂಡ, ಸೇನೆಯ 09 ಆರ್​ಆರ್ ಮತ್ತು ಸಿಆರ್​ಪಿಎಫ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆಯಿತು.ತಂಡವು ಶಂಕಿತ ಸ್ಥಳವನ್ನು ಸುತ್ತುವರಿಯುತ್ತಿದ್ದಂತೆ, ಅಡಗಿದ ಉಗ್ರರು ಅವರ ಮೇಲೆ ಗುಂಡು ಹಾರಿಸಿದರು. ಜಂಟಿ ತಂಡವು ಪ್ರತಿಯಾಗಿ ಗುಂಡಿನ ದಾಳಿ ನಡೆಸಿತು. ಇದು ಎನ್​​ಕೌಂಟರ್ ಗೆ ಪ್ರಚೋದನೆಯಾಯಿತು.
ಇದನ್ನೂ ಓದಿ:ಸ್ವತಃ ಗುಂಡು ಹಾರಿಸಿಕೊಂಡು ತೀವ್ರ ಗಾಯಗೊಂಡ ಸಿಆರ್​ಪಿಎಫ್ ಪೇದೆ
ಇದರಿಂದ ಮತೊಬ್ಬ ಉಗ್ರನ ಹತ್ಯೆಯಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒಳಗೊಂಡಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಡಗಿರಬಹುದಾದ ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು ಸಹ ಗಾಯಗೊಂಡಿದ್ದು, ಅವರ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಗರದ 92 ಬೇಸ್ ಆಸ್ಪತ್ರೆಗೆ ಸೇರಿಸಲಾಗಿದೆ.
‘ಬಂಟಿ ಔರ್ ಬಬ್ಲಿ’ ಯಿಂದ ಸ್ಫೂರ್ತಿಗೊಂಡ ದರೋಡೆಕೋರ ದಂಪತಿ ಈಗ ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 3 =
Remember me
