ಸಿಕ್ಕಿಂ:ಸಿಕ್ಕಿಂನ ರಾಣಿಪೂಲ್‌ನಲ್ಲಿ ದಾರುಣ ಘಟನೆಯೊಂದು ಸಂಭವಿಸಿದ್ದು, ಜಾತ್ರೆ ನಡೆಯುತ್ತಿದ್ದ ಮೈದಾನದ ಬಳಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಭಯಾನಕ ಘಟನೆಯು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ಜಾಲತಾಣಗಳಲ್ಲಿ ಹರಿದಾಡಿದೆ.
ಇದನ್ನೂ ಓದಿ:ಸೌರವ್ ಗಂಗೂಲಿ ಮನೆಯಲ್ಲಿ ಭಾರೀ ಕಳ್ಳತನ; ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಗೂಲಿ
ನಿಂತಿದ್ದ ಕಾರುಗಳಿಗೆ ರಭಸವಾಗಿ ಡಿಕ್ಕಿ ಹೊಡೆದ ಹಾಲಿನ ಟ್ಯಾಂಕರ್ ಜಾತ್ರೆಯ ಮೈದಾನದೊಳಗೆ ಪ್ರವೇಶಿಸಿದೆ. ದಿಢೀರ್​ ಎಂಬಂತೆ ನುಗ್ಗಿದ ಲಾರಿಯಿಂದ ತಪ್ಪಿಸಿಕೊಳ್ಳಲಾಗದೆ ಹಲವರು ವಾಹನಗಳ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಲಿನ ಟ್ಯಾಂಕರ್​ನ ಬ್ರೇಕ್ ವೈಫಲ್ಯದಿಂದ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಪ್ರಾಥಮಿಕ ತನಿಖೆಗಳು ಸೂಚಿಸಿವೆ. ಗಾಯಗೊಂಡವರನ್ನು ತಕ್ಷಣವೇ ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ಸಾಗಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 18 =
Remember me
