ನವದೆಹಲಿ:ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಅಧಿಕಾರಕ್ಕೇರಬೆಂಕೆಂದು ಪಣ ತೊಟ್ಟಿರುವ ಇಂಡಿಯಾ ಒಕ್ಕೂಟದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲವೆಂಬುದು ಗೋಷರವಾಗುತ್ತಿದೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ನ ಸಂಸದರೊಬ್ಬರು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಜಾದವ್‌ಪುರದ ಸಂಸದೆ ನಟಿ ಮಿಮಿ ಚಕ್ರವರ್ತಿ ತಮ್ಮ ರಾಜೀನಾಮೆ ಪತ್ರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
VIDEO | "I have definitely resigned, but my resignation hasn't been accepted. I have coordinated with the CM, and she assured me that she will take care of everything," says Mimi Chakraborty on her resignation from the TMC.pic.twitter.com/WoLWztS8t9
ಇದನ್ನೂ ಓದಿ:ತೆರೆ ಮೇಲೆ ಅಬ್ಬರಿಸಲಿದೆ ಮಕ್ಕಳ ನೆಚ್ಚಿನ ಶಕ್ತಿಮಾನ್​
ಈ ಕುರಿತು ಮಾತನಾಡಿರುವ ಮಿಮಿ ಚಕ್ರವರ್ತಿ, ಅಭಿವೃದ್ಧಿಯ ವಿಚಾರದಲ್ಲಿ ನಾನು ಜಾದವ್​ಪುರವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಬೇಕು ಎಂದುಕೊಂಡಿದ್ದೆ. ಆದರೆ, ನಾನು ಈ ವಿಚಾರದಲ್ಲಿ ಸಾಕಷ್ಟು ಅಡೆತಡೆಗಳನ್ನು ಎದುರಿಸಿದೆ ಮತ್ತು ಸ್ಥಳೀಯ ನಾಯಕತ್ವವು ನನಗೆ ಹೆಚ್ಚು ಸಹಕರಿಸಲಿಲ್ಲ. ಚಲನಚಿತ್ರ ಹಿನ್ನಲೆಯಿಂದ ಬಂದವಳು ಈಕೆ ಹೆಚ್ಚು ಕೆಲಸ ಮಾಡುವುದಿಲ್ಲ ಎಂದು ಪದೇ ಪದೇ ನನ್ನನ್ನು ಕೆಣಕುತ್ತಿದ್ದರು. ಈ ವಿಚಾರವಾಗಿ ನಾನು ರಾಜೀನಾಮೆ ನೀಡಿದ್ಧೇನೆ ಎಂದು ತಿಳಿಸಿದ್ದಾರೆ.
ಇತ್ತೀಚಿಗೆ ನಟಿ, ಟಿಎಂಸಿ ಸಂಸದೆ ನುಸ್ರತ್​ ಜಹಾನ್ ಸಹ ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಸಂದೇಶ್​ ಕಾಳಿಯಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮಾತನಾಡದೆ ಮೌನ ವಹಿಸಿದ್ದಾರೆ. ಇತ್ತ ಮಿಮಿ ಚಕ್ರವರ್ತಿ ರಾಜೀನಾಮೆ ಟಿಎಂಸಿಗೆ ತಲೆನೋವಾಗಿ ಪರಿಣಮಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದು ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 11 =
Remember me
