ಕೋಲ್ಕತ್ತಾ:ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಲಾಗಿದೆ. ಇದಕ್ಕೆ ಸೆಲೆಬ್ರಿಟಿಗಳು ಕೂಡ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಆ.14ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ನಟಿಯರಾದ ರಿದ್ಧಿ ಸೇನ್, ಅರಿಂದಮ್ ಸಿಲ್ ಮತ್ತು ಮಧುಮಿತಾ ಸರ್ಕಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್ ನ ಮಾಜಿ ಸಂಸದೆ ಹಾಗೂ ನಟಿ ಮಿಮಿ ಚಕ್ರವರ್ತಿ ಭಾಗವಹಿಸಿದ್ದರು. ಆದರೆ ಈಗ ಅವರಿಗe ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ:‘ನನಗೆ ಬಹಳ ಹಿಂದೆಯೇ ಆ ಟ್ರೈನ್ ಮಿಸ್​’: ಡೇಟಿಂಗ್ ಕುರಿತು ಬಾಲಿವುಡ್​ ನಟಿ ಬಿಚ್ಚಿಟ್ಟ ಸತ್ಯ..
ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅತ್ಯಾಚಾರದ ಬೆದರಿಕೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
‘ನಾವು ಮಹಿಳೆಯರಿಗೆ ನ್ಯಾಯ ಕೇಳುತ್ತಿದ್ದೇವೆ. ಇದು ಒಳ್ಳೆಯದಲ್ಲವೇ? ಆದರೆ ಕೆಲವು ಗೂಂಡಾಗಳು ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ. ಸುಶಿಕ್ಷಿತರು ಇದನ್ನು ಬೆಂಬಲಿಸುತ್ತಾರೆಯೇ?’ ಎಂದು ಪ್ರಶ್ನಿಸಿ ಅವರು ಈ ಪೋಸ್ಟ್ ಅನ್ನು ಕೋಲ್ಕತ್ತಾದ ಸೈಬರ್ ಪೋಲೀಸ್ ಸೆಲ್ ವಿಭಾಗಕ್ಕೆ ಟ್ಯಾಗ್ ಮಾಡಿದ್ದಾರೆ.
ಮಿಮಿ ಚಕ್ರವರ್ತಿ 2008 ರಿಂದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ ಮತ್ತು 2012 ರಲ್ಲಿ ಚಲನಚಿತ್ರಗಳಿಗೆ ಪ್ರವೇಶಿಸಿದ್ದಾರೆ ಮತ್ತು ಅನೇಕ ಹಿಟ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. 2014 ಮತ್ತು 2024 ರ ನಡುವೆ ಅವರು ತೃಣಮೂಲ ಕಾಂಗ್ರೆಸ್‌ನ ಸಂಸದೆಯಾಗಿ ಆಯ್ಕೆಯಾಗಿದ್ದರು.
ರಿಯಾಕ್ಟರ್ ಸ್ಫೋಟ: ಏಳು ಕಾರ್ಮಿಕರು ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − three =
Remember me
