ಬೆಂಗಳೂರು:ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಅವರ ತಂದೆಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ. ಕುಟುಂಬದ ಇತರ ಸದಸ್ಯರು ಕುಡ ಪರೀಕ್ಷೆಗೆ ಒಳಗಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.
ರಾಜ್ಯದಲ್ಲಿ ವ್ಯಾಪಿಸುತ್ತಿರುವ ಕರೊನಾ ಸಂಕಷ್ಟದ ಬಗ್ಗೆ ಸಭೆ ನಡೆಸಲು ಸಿಎಂ ಯಡಿಯೂರಪ್ಪ ಸೋಮವಾರ ಸಭೆ ಕರೆದಿದ್ದರು. ಈ ಸಭೆಗೆ ಸುಧಾಕರ್​ ಹಾಜರಾಗಿರಲಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಸುಧಾಕರ್​ ಅದಕ್ಕೆ ಕಾರಣವನ್ನು ತಿಳಿಸಿದ್ದರು.
ಇದನ್ನೂ ಓದಿ;ಚೀನಾ ಸಂಘರ್ಷದಲ್ಲಿ ಬಲಿಯಾದ ಯೋಧನ ಕುಟುಂಬಕ್ಕೆ ಐದು ಕೋಟಿ ರೂ., ಪತ್ನಿಗೆ ಸಹಾಯಕ ಆಯುಕ್ತೆ ಹುದ್ದೆ ನೀಡಿದ ತೆಲಂಗಾಣ
ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ 82 ವರ್ಷದ ನನ್ನ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಟ್ವೀಟ್​ ಮಾಡಿದ್ದರು.
ಇದಾದ ಬಳಿಕ ಮತ್ತೊಂದು ಟ್ವೀಟ್​ ಮಾಡಿ, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದರು. ಸುಧಾಕರ್​ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕರೊನಾ ಸೋಂಕು ಕಂಡ ಬಂದ ಕಾರಣ ಸಚಿವರ ಕುಟುಂಬದ ಎಲ್ಲ ಸದಸ್ಯರು ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದರು.
ಇದನ್ನೂ ಓದಿ;20 ವರ್ಷ ಜೀವಂತವಾಗಿರುತ್ತೆ ಕರೊನಾ; ಹಸಿ ಮಾಂಸ, ಮೀನು ಮುಟ್ಟಬೇಡಿ; ಚೀನಾ ತಜ್ಞರ ಎಚ್ಚರಿಕೆ
ಈ ನಡುವೆ, ಇನ್ನೊಂದು ಟ್ವಿಟ್​ ಮಾಡಿದ್ದ ಸುಧಾಕರ್​, ಸರ್ಕಾರದ ಹಿಂದಿನ ಮಾರ್ಗಸೂಚಿ ಅನ್ವಯವೇ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ಈಗಲೂ ಅದೇ ಮುಂದುವರಿದಿದೆ. ಯಾವುದೇ ಹೊಸ ಮಾರ್ಗಸೂಚಿ ಮಾಡಲಾಗಿಲ್ಲ. ಅಂತರ್ ರಾಜ್ಯ ಪ್ರಯಾಣಿಕರು ಯಾವ ರಾಜ್ಯದಿಂದ ಆಗಮಿಸುತ್ತಿದ್ದಾರೆ ಎನ್ನುವುದರ ಮೇಲೆ ಅವರ ಕ್ವಾರಂಟೈನ್ ಅವಧಿ ಅವಲಂಬಿತವಾಗಿದೆ. ನನ್ನ ಟ್ವೀಟ್ ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
