ಧಾರವಾಡ:ಕೇಂದ್ರ ಸರ್ಕಾರದ 2023-24ನೇ ಬಜೆಟ್ ಮಂಡಿಸಲು ಕೆಂಪು ಬಣ್ಣದ ಸೀರೆ ಉಟ್ಟು ಬಂದಿದ್ದ ನಿರ್ಮಲಾ ಸೀತಾರಾಮನ್ ವಿಶೇಷವಾಗಿ ಗಮನ ಸೆಳೆದರು. ಮತ್ತೊಂದು ವಿಶೇಷವೆಂದರೆ ವಿತ್ತ ಸಚಿವೆ ಉಟ್ಟಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಉಡುಗೊರೆಯಾಗಿ ನೀಡಿದ್ದ ಕೈಮಗ್ಗದ ಸೀರೆ.
ಕಳೆದ ಡಿಸೆಂಬರ್​ನಲ್ಲಿ ಕೈಮಗ್ಗದಲ್ಲಿ ಮಾಡಿದ್ದ ಏಳು ಇಳಕಲ್​ ರೇಷ್ಮೆ ಸೀರೆಗಳನ್ನು ಆಯ್ಕೆ ಮಾಡಲು ಧಾರವಾಡದಿಂದ ರವಾನೆ ಮಾಡಲಾಗಿತ್ತು. ಈ ವೇಳೆ ನಿರ್ಮಲಾ ಸೀತಾರಾಮನ್ ಅವರೇ ಕೆಂಪು ಬಣ್ಣದ ಕೈಮಗ್ಗದ ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಇದೀಗ ಅದೇ ಸೀರೆಯನ್ನು ಬಜೆಟ್ ಮಂಡನೆಗೆ ಉಟ್ಟುಕೊಂಡು ಬಂದಿದ್ದಾರೆ.
ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ@nsitharaman.ನಮ್ಮ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದು ಅತ್ಯಂತ ಅಭಿವೃದ್ಧಿ ಪೂರಕ ಬಜೆಟ್ ಮಂಡಿಸಿದ್ದು ನಮಗೇಲ್ಲರಿಗೂ ಹೆಮ್ಮೆಯ ವಿಷಯ.#AmritKaalBudget#Budget2023pic.twitter.com/WMauxOPU2o— Pralhad Joshi (@JoshiPralhad)February 1, 2023
ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ@nsitharaman.ನಮ್ಮ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದು ಅತ್ಯಂತ ಅಭಿವೃದ್ಧಿ ಪೂರಕ ಬಜೆಟ್ ಮಂಡಿಸಿದ್ದು ನಮಗೇಲ್ಲರಿಗೂ ಹೆಮ್ಮೆಯ ವಿಷಯ.#AmritKaalBudget#Budget2023pic.twitter.com/WMauxOPU2o
ನಿರ್ಮಲಾ ಸೀತಾರಾಮನ್ ತಮ್ಮಿಷ್ಟದ ಸೀರೆಯನ್ನು ಆಯ್ಕೆ ಮಾಡಿದ ನಂತರ ಈ ಸೀರೆಗೆ ಧಾರವಾಡದ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್​ನ ಮಹಿಳೆಯರು ಸೇರಿಕೊಂಡು ಕಸೂತಿ ಮಾಡಿದ್ದಾರೆ. ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿರುವ ಈ ಇಳಕಲ್ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
