ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​​ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ಧಾರ್ಮಿಕ ಭಾನವೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಉತ್ತರಪ್ರದೇಶದ ರಾಮ್​ಪುರದಲ್ಲಿ FIR ದಾಖಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್​ ಖರ್ಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಉತ್ತರಪ್ರದೇಶದಲ್ಲಿ ನನ್ನ ವಿರುದ್ಧ ಭಕ್ತರು ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರತಿಯೊಂದು ಧರ್ಮವು ಮನುಷ್ಯರ ನಡುವೆ ಭೇದಭಾವ ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಆ ಅರ್ಥದಲ್ಲಿ ಮಾತನಾಡಲಾಗಿದೆ. ನಾನು ಕಾನೂನು ಹಾಗೂ ಸಂವಿಧಾನದವನ್ನು ನಂಬುತ್ತೇನೆ. ಸಂವಿಧಾನವೇ ನನ್ನ ಧರ್ಮ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಸನಾತನ ಧರ್ಮದ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಸಚಿವ ಉದಯನಿಧಿ ಸ್ಟಾಲಿನ್​ ಹಾಗೂ ಅವರ ಭಾಷಣವನ್ನು ಸಮರ್ಥಿಸಿಕೊಳ್ಳುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪಿಸಿ ವಕೀಲರಾದ ಹರ್ಷ್​ ಗುಪ್ತಾ​ ಹಾಗೂ ರಾಮ್​ ಸಿಂಗ್​ ಲೋಧಿ ಎಂಬುವವರು ದೂರು ದಾಖಲಿಸಿದ್ದರು. ಸಚಿವರಾದ ಉದಯನಿಧಿ ಸ್ಟಾಲಿನ್​ ಹಾಗೂ ಪ್ರಿಯಾಂಕ್​ ಖರ್ಗೆ ವಿರುದ್ಧ ಭಾರತ ದಂಡ ಸಂಹಿತೆ (IPC Section) 295A, 153A ಅಡಿ FIR ದಾಖಲಿಸಿಕೊಳ್ಳಲಾಗಿದೆ.
Bhakts have lodged an FIR against me in Uttar Pradesh for stating that:– Every religion should treat all human beings equally without discrimination– Constitution is my religionpic.twitter.com/VW6sEkDaZs
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
