ದೆಹಲಿ:ಕೇಂದ್ರ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.
ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​ ಅಂಗಡಿ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಬುಧವಾರ ರಾತ್ರಿ ಮೃತಪಟ್ಟಿದ್ದರು. ದೆಹಲಿಯ ದ್ವಾರಕಾ ಸೆಕ್ಟರ್​ 24ರಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಹಾಗೂ ಕೋವಿಡ್​ ನಿಯಮದಂತೆ ನೆರವೇರಿಸಲಾಯಿತು.
ಸುರೇಶ್​ ಅಂಗಡಿ ಅಂತ್ಯಕ್ರಿಯೆ ವಿಧಿವಿಧಾನವನ್ನು ಬೆಳಗಾವಿ ನಿವಾಸದಿಂದಲೇ ಆನ್​ಲೈನ್​ ಲೈವ್​ ಮೂಲಕ ಅವರ ತಾಯಿ ಸೋಮವ್ವ ವೀಕ್ಷಿಸುತ್ತ ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಬೆಳಗಾವಿಯಲ್ಲೇ ಇದ್ದ ಸಚಿವರ ಹಿರಿಯ ಮಗಳು-ಮೊಮ್ಮಗಳು ಸೇರಿದಂತೆ ಕುಟುಂಬಸ್ಥರು ಗುರುವಾರ ಬೆಳಗ್ಗೆ ದೆಹಲಿಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ಸಚಿವ ಜಗದೀಶ ಶೆಟ್ಟರ್​, ಡಿಸಿಎಂ ಲಕ್ಷ್ಮಣ್​ ಸವದಿ, ಅಣ್ಣಾ ಸಾಹೇಬ್​ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.
ಶಾಸಕ ನಾರಾಯಣರಾವ್​ ನಿಧನ

ಆಸ್ಪತ್ರೆಗೆ ಹೋಗುವ ಮುನ್ನ ಈ ಪುಟ್ಟ ಕಂದಮ್ಮನ ಜತೆಯಲ್ಲಿ ಆಟವಾಡಿದ್ದ ಸುರೇಶ್​ ಅಂಗಡಿ…

ನನ್ನ ಮಗ ಬಂದೇ ಬರುತ್ತಾನೆ… ಎಂದು ಗೋಳಾಡಿದ ಸುರೇಶ್​ ಅಂಗಡಿ ತಾಯಿ ಸೋಮವ್ವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
