ಲಖನೌ:ತಮ್ಮ ಮಾತನ್ನು ಕೇಳಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಒಬ್ಬನನ್ನು ಮದರಸದಲ್ಲಿ ಕೂಡಿ ಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ.
ಘಟನೆ ಸಂಬಂಧ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮದರಾಸದ ಮುಖ್ಯಸ್ಥ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಾಲಕನ ತಂದೆ ಹಾಗೂ ತಾಯಿ ಕೂಲಿಕಾರ್ಮಿಕರಾಗಿದ್ದು, ತಮ್ಮ ಮಗನನ್ನು ಸಹರಾನ್​ಪುರದಲ್ಲಿರುವ ಮದರಸದಲ್ಲಿ ಬಿಟ್ಟಿದ್ದರು. ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಊಟ ಕೊಡದೇ ಸರಪಳಿಯಲ್ಲಿ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ.
#सहारनपुर*सहारनपुर के मदरसे में बच्चे के साथ बर्बरतामदरसे में जंजीर से बांध कर रखा गया मासूमबच्चे का वीडियो सोशल मीडिया पर वायरलगंगोह थाना क्षेत्र के बालू गांव का मामला@SaharanpurDm@saharanpurpol@Uppolice@aauplko@UPGovt@CMOfficeUPpic.twitter.com/CtcKq44JYk
ಇದನ್ನೂ ಓದಿ:ನಕಲಿ ಮದ್ಯ ಸೇವನೆ ಪ್ರಕರಣ; ಸಾವಿನ ಸಂಖ್ಯೆ 18ಕ್ಕೆ ಏರಿಕೆ
ಬಾಲಕ ಹೇಗೋ ತಪ್ಪಿಸಿಕೊಂಡು ಹತ್ತಿರದ ಬಲ್ಲು ಎಂಬ ಗ್ರಾಮಕ್ಕೆ ತೆರಳಿದ್ದಾನೆ. ಅಸ್ವಸ್ಥಗೊಂಡಿದ್ದ ಬಾಲಕನನ್ನು ಗ್ರಾಮಸ್ಥರು ಸಂತೈಸಿ ವಿಚಾರಿಸಿದಾಗ ಆತ ನಡೆದ ಘಟನೆ ಬಗ್ಗೆ ವಿವರಿಸಿದ್ದಾನೆ. ಕೂಡಲೇ ಆತನ ಪೋಷಕರು ಹಾಗೂ ಸ್ಥಳೀಯ ಪೊಲೀಸ್​ ಠಾಣೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಕೂಡಲೇ ತೆರಳಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಳಿಕ ಮದರಸಗೆ ತೆರಳಿ ವಿಚಾರಣೆ ನಡೆಸಿದಾಗ ಆ ರೀತಿ ಏನು ನಡೆದಿಲ್ಲ. ಸುಮ್ಮನೆ ಆರೋಪ ಮಾಡಲಾಗುತ್ತಿದ್ದು, ಬಾಲಕನ ಮೇಲೆ ಹಲ್ಲೆ ನಡೆದಿಲ್ಲ ಎಂದು ಹೇಳಿದ್ದಾರೆ. ಮದರಸಾದ ಮುಖ್ಯಸ್ಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತ ತನ್ನ ಮಾತನ್ನು ಕೇಳಲಿಲ್ಲ ಎಂಬಬ ಕಾರಣಕ್ಕೆ ಈ ರಿತಿ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದಿ, ವಿಚಾರಣೆ ನಡೆಯುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
