ನವದೆಹಲಿ:ಲಾಕ್​ಡೌನ್​ ನಿಯಮ ಉಲ್ಲಂಘಿಸಿರುವ ಆರೋಪದ ಮೇಲೆ ಬಂಧನದಲ್ಲಿ ಇರುವ ಉತ್ತರ ಪ್ರದೇಶದ ಕಾಂಗ್ರೆಸ್​ ಮುಖಂಡ ಸಚಿನ್​ ಚೌಧರಿಯ ಬಿಡುಗಡೆಗೆ ಹೋಗಿ ಅವರ ಅಪ್ರಾಪ್ತ ಮಕ್ಕಳು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.ಕರೊನಾ ವೈರಸ್​ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಆದಿತ್ಯನಾಥ ವಿಫಲರಾಗಿದ್ದಾರೆ ಎಂದು ಹೇಳುವುದಕ್ಕಾಗಿ ಲಾಕ್​ಡೌನ್​ ನಿಯಮವನ್ನು ಮೀರಿ ಪತ್ರಿಕಾಗೋಷ್ಠಿ ನಡೆಸಿರುವ ಆರೋಪ ಇವರ ಮೇಲಿದೆ. ಜತೆಗೆ, ವಿಪತ್ತು ನಿರ್ವಹಣಾ ಕಾಯ್ದೆಯನ್ನೂ ಮೀರಿ ಆಹಾರ ಹಂಚಿಕೆ ಮಾಡಿರುವ ಆರೋಪವೂ ಇದೆ.ಈ ಹಿನ್ನೆಲೆಯಲ್ಲಿ ಇವರನ್ನು ಪೊಲೀಸರು ಬಂಧಿಸಿದ್ದು, 11ರಿಂದ ಪೊಲೀಸ್​ ಕಸ್ಟಡಿಯಲ್ಲಿ ಇದ್ದಾರೆ. ಅವರನ್ನು ಬಿಡುಗಡೆ ಮಾಡುವಂತೆ ಈಗ ಅವರ ಮಕ್ಕಳು ಕೋರ್ಟ್​ ಮೊರೆ ಹೋಗಿದ್ದಾರೆ. 2 ಮತ್ತು 7 ವರ್ಷದ ಮಕ್ಕಳಿಂದ ಈ ಅರ್ಜಿಯನ್ನು ಸಲ್ಲಿಸಲಾಗಿದೆ.ತಮ್ಮ ತಂದೆ ಯಾವುದೇ ತಪ್ಪು ಮಾಡಲಿಲ್ಲ. ರಾಜಕೀಯ ದುರುದ್ದೇಶದಿಂದ ಅವರನ್ನು ಬಂಧಿಸಲಾಗಿದೆ. ತಮ್ಮ ತಂದೆ ಕಾಂಗ್ರೆಸ್​ ಪಕ್ಷದ ಮುಖಂಡನಾಗಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಪಿತೂರಿಯಿಂದ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ. ಲಾಕ್​ಡೌನ್​ ಹಿನ್ನೆಲೆಯಲ್ಲಿ ಅವರನ್ನು ನೋಡಹೋಗಲು ಸಾಧ್ಯವಾಗುತ್ತಿಲ್ಲ. ಅವರು ಇಲ್ಲದೇ ತಮಗೆ ತೊಂದರೆ ಆಗಿದೆ. ಆದ್ದರಿಂದ ತಂದೆಯನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.ತಮ್ಮ ಮನೆಯಲ್ಲಿ ಅಮ್ಮ ಮತ್ತು ಅಜ್ಜಿ ಅಷ್ಟೇ ಇರುವುದು. ಬೇರೆ ಯಾವುದೇ ಪುರುಷರು ಕುಟುಂಬದಲ್ಲಿ ಇಲ್ಲದೇ ಇರುವ ಕಾರಣ, ಇಡೀ ಕುಟುಂಬ ಮಾನಸಿಕ ವೇದನೆಯನ್ನು ಅನುಭವಿಸುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಈ ಮಕ್ಕಳ ಪರವಾಗಿ ವಕೀಲ ಸ್ಮರಹಣ್​ ಸಿಂಗ್​ ವಾದ ಮಂಡಿಸುತ್ತಿದ್ದಾರೆ. ಅರ್ಜಿಯು ಶೀಘ್ರದಲ್ಲಿ ವಿಚಾರಣೆಗೆ ಬರುವ ನಿರೀಕ್ಷೆ ಇದೆ.(ಏಜೆನ್ಸೀಸ್​)
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × 4 =
Remember me
