ಮುಂಬೈ:ಮಹಿಳಾ ಪೊಲೀಸ್​ ಅಧಿಕಾರಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಘಟನೆ ಮುಂಬೈನ ಸೂರ್ಯನಗರದಲ್ಲಿ ನಡೆದಿದೆ.
ಮೂವರು ಆರೋಪಿಗಳ ಬಂಧನದ ಸುದ್ದಿ ಪ್ರದೇಶದ ಸುತ್ತ ವ್ಯಾಪಕವಾಗಿ ಹರಡಿದ್ದು, ಘರ್ಷಣೆಯಾಗುವ ಸಂಭವವಿದೆ. ಸೂರ್ಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಾರ್ಕ್​ಸೈಟ್​ ಠಾಣೆಯ ಪೊಲೀಸ್​ ಅಧಿಕಾರಿಯೊಬ್ಬರು ಶುಕ್ರವಾರ ರಾತ್ರಿ 11 ಘಂಟೆ ಸುಮಾರಿಗೆ ಮಹಿಳಾ ಅಧಿಕಾರಿ ತಮ್ಮ ಕೆಲಸ ಮುಗಿಸಿ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದರು. ಆ ನಂತರ ಸಂಬಂಧಿಕರ ಮನೆಯಿಂದ ಕುಟುಂಬ ಸದಸ್ಯರ ಜತೆಗೆ ಊಟಕ್ಕೆಂದು ಹೊರಗಡೆ ಹೋಗುವ ವೇಳೆ ದಾರಿ ಮಧ್ಯದಲ್ಲಿ ಅಪ್ರಾಪ್ತ ವಯಸ್ಕನೋರ್ವ ಪೊಲೀಸ್​ ಅಧಿಕಾರಿಯನ್ನು ಅಡ್ಡಗಟ್ಟಿ ಆಕೆಗೆ ಕಿರುಕುಳ ನೀಡಿದ್ದಾನೆ.
#Shocking!!मुंबई के विक्रोली में महिला पुलिसकर्मी से छेड़छाड़। (वीडियो में सुना जा सकता है कि आरोपी को पकड़ने के बहाने उसके हिमायतियों ने उसे मौके से भगा दिया।)इस मामले को लेकर लोगों ने पुलिस स्टेशन के सामने जय श्री राम के नारे लगाए और हनुमान चालीसा का पाठ करते हुए आरोपी को…pic.twitter.com/yAeZYYp84U
ಇದನ್ನೂ ಓದಿ:ಆಸ್ಪತ್ರೆಯಲ್ಲಿ ಪವರ್ ಕಟ್; ಮೊಬೈಲ್​ ಟಾರ್ಚ್​ನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ ವೈದ್ಯರು
ಕೂಡಲೇ ಆತನನ್ನು ಹಿಡಿಯಲು ಯತ್ನಿಸಿದರಾದರೂ ಆತ ಇನ್ನಿಬ್ಬರು ಆರೋಪಿಗಳ ಸಹಾಯದೊಂದಿಗೆ ತಪ್ಪಿಸಿಕೊಂಡಿದ್ದಾನೆ. ಕೂಡಲೇ ಸಂತ್ರಸ್ತೆ ಹತ್ತಿರದಲ್ಲಿದ್ದ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಎಚ್ಚೆತ್ತ ಅಧಿಕಾರಿಗಳ ಆರೋಪಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.
ಪ್ರಕರಣ ದಾಖಲಾದ 24 ಘಂಟೆಯೊಳಗೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ಮುಗಿದ ಬಳಿಕ ಚಾರ್ಜ್​ಶೀಟ್​ ಸಿದ್ದಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಾರ್ಕ್​​ಸೈಟ್​ ಠಾಣೆಯ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಶುಕ್ರವಾರ ಸಂಜೆ ನಡೆಯುತ್ತಿದ್ದ ಈದ್​ ಮಿಲಾದ್​ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಕೋಮು ಸೌಹಾರ್ದತೆ ಕದಡಲು ಈ ರೀತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಹಲವು ಹಿಂದೂಪರ ಸಂಘಟನೆಗಳು ಪಾರ್ಕ್​ಸೈಟ್​ ಪೊಲೀಸ್​ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
