ಮುಜಾಫರ್​​ನಗರ:15 ವರ್ಷದ ಅಪ್ರಾಪ್ತ ಬಾಲಕಿಯನ್ನು ಸಹೋದರನ ಎದುರೇ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್​​ನಗರದಲ್ಲಿ ನಡೆದಿದೆ.
ಇದನ್ನೂ ಓದಿ:ರಾಜ್ ​ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ
ಬಾಲಕಿ ಪೋಷಕರು ಕಾರ್ಯಕ್ರಮ ನಿಮಿತ್ತ ಬೇರೆ ಹಳ್ಳಿಗೆ ಹೊರಟಿದ್ದಾಗ, ಪಕ್ಕದ ಮನೆಯವರು ತಮ್ಮ ಮನೆಗೆ ಪ್ರವೇಶಿಸಿ ಮಕ್ಕಳು ಮಲಗಿದ್ದನ್ನು ನೋಡಿದ್ದಾರೆ ಎಂದು ಬಾಲಕಿಯ ತಂದೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿ ಬಾಲಕಿಗೆ ಗನ್ ತೋರಿಸಿ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಒಳಗೆ ನುಗ್ಗಿದ್ದಾನೆ. ನಂತರ ಆರೋಪಿಗಳು ಬಾಲಕಿಯ 12 ವರ್ಷದ ಸಹೋದರನ ಎದುರೇ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಕೃತ್ಯದ ವಿಡಿಯೋವನ್ನು ಸಹ ಚಿತ್ರೀಕರಿಸಿದ್ದು, ಪೊಲೀಸರಿಗೆ ದೂರು ನೀಡಿದರೆ ಅದನ್ನು ವೈರಲ್ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ.
ಇದನ್ನೂ ಓದಿ:ಕಾಲೇಜು ವಿದ್ಯಾರ್ಥಿಗಳ ಸಂಭ್ರಮ, ಪದವಿ, ಸ್ನಾತಕೋತ್ತರ ಪದವಿ ತರಗತಿ ಆರಂಭ ಕೋವಿಡ್ ಮಾರ್ಗಸೂಚಿ ಪಾಲನೆ
ಬಾಲಕಿಯ ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.ಸಾಮೂಹಿಕ ಅತ್ಯಾಚಾರ, ಮನೆ ಅತಿಕ್ರಮಣ, ಕೊಲೆ ಬೆದರಿಕೆ ಮತ್ತು ಪೊಕ್ಸೊ ಕಾಯ್ದೆಯಡಿ ಬಂಧಿತ ಮೂವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 2 =
Remember me
