ಪಟ್ನಾ:ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹಾಗೂ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿಯನ್ನು ನಿರಾಕರಿಸಿದರು ಎಂಬ ಕಾರಣಕ್ಕೆ ಇಬ್ಬರು ಯುವಕರು ಅಪ್ರಾಪ್ತ ವಯಸ್ಕ ಹುಡುಗಿಯರನ್ನು ಹಾಗೂ ಆಕೆಯ ತಂದೆಯನ್ನು ಕೊಂದಿರುವ ಘಟನೆಯೊಂದು ಬಿಹಾರದ ಸರನ್​ನಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ರಸುಲ್​ಪುರ ಮೂಲದ ಸುಧಾಂಶು ಕುಮಾರ್ ಅಲಿಯಾಸ್ ರೋಷನ್ ಮತ್ತು ಅಂಕಿತ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಇಬ್ಬರು ಬಾಲಕಿಯರು ಹಾಗೂ ಅವರ ತಂದೆ ಮೃತಪಟ್ಟಿದ್ದು, ಅವರ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿಯ ಹೇಳಿಕೆ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH| Bihar | A man and his two minor daughters murdered by criminals at their residence in Dhana Dih village of Saran last night. The man's wife was sent to a hospital in injured condition. Two accused – Sudhanshu Kumar and Ankit Kumar – nabbed by Police. Murder weapon…pic.twitter.com/TL0eNrVPQq
ಇದನ್ನೂ ಓದಿ:WCL ಟ್ರೋಫಿ ಗೆದ್ದು ವಿಚಿತ್ರವಾಗಿ ಸಂಭ್ರಮಿಸಿದ ಯುವಿ, ಭಜ್ಜಿ, ರೈನಾ ವಿರುದ್ಧ ದೂರು ದಾಖಲು; ಕಾರಣ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಧನದಿಹ್ ಗ್ರಾಮದ ತಾರಕೇಶ್ವರ್ ಸಿಂಗ್ ಅಲಿಯಾಸ್ ಜಬರ್ ಸಿಂಗ್ ಎಂಬುವವರ ಮನೆಯ ಮೇಲೆ ಇಬ್ಬರು ದಾಳಿ ಮಾಡಿದ್ದಾರೆ ಎಂದು ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಬಂತು. ಸ್ಥಳಕ್ಕೆ ತೆರಳುವಷ್ಟರಲ್ಲಿ ಆರೋಪಿಗಳಿಬ್ಬರು ಮನೆಯಲ್ಲಿದ್ದವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಮೃತರ ಪೈಕಿ ಓರ್ವಳನ್ನು ಆರೋಪಿ ಸುಧಾಂಶು ಕುಮಾರ್​ ಪ್ರೀತಿಸುತ್ತಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿದರು ಎಂಬ ಕಾರಣಕ್ಕೆ ತ್ರಿವಳಿ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಲಾಗಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದ್ದು, ಗಾಯಾಳು ಮಹಿಳೆ ಹೇಳಿಕೆ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − nine =
Remember me
