ಕೋಲ್ಕತ್ತಾ:ಬಾಂಬ್ ಸ್ಪೋಟಗೊಂಡು ಏಳು ವರ್ಷದ ಬಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಕರ್ನಾಲ್ ಉಪಚುನಾವಣೆ ನಾಮಪತ್ರ ಸಲ್ಲಿಸಿದ ಹರಿಯಾಣ ನಯಾಬ್ ಸಿಂಗ್ ಸೈನಿ!
ಹೂಗ್ಲಿ ಜಿಲ್ಲೆಯ ಪಾಂಡುವಾದಲ್ಲಿ ಕೊಳದ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗಾಯಳುಗಳನ್ನು ಸ್ಥಳೀಯ ಆರೋಗ್ಯ ಆಸ್ಪತ್ರೆಯಲ್ಲಿ ಮಾಡಿದ್ದಾರೆ. ಈ ಸಂಬಂಧ ಹೂಗ್ಲಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಘಟನೆ ವಿವರ: ಪಾಂಡುವಾ ನೇತಾಜಿಪಲ್ಲಿ ಕಾಲೋನಿಯ ಕೊಳದ ಪಕ್ಕದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿದೆ. ಏಕಾಏಕಿ ಆ ಪ್ರದೇಶದಲ್ಲಿ ಭಾರೀ ಶಬ್ದ ಕೇಳಿಬಂದಿದೆ. ತಕ್ಷಣವೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ನೋಡಿದಾಗ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಗಮನಿಸಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ರೂಪಮ್ ಬಲ್ಲವ್ (13) ಮತ್ತು ಸೌರವ್ ಚೌಧರಿ (8) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ.
ಸ್ಥಳೀಯ ಸಂಸದೆ ಲಾಕೆಟ್​ ಚಟರ್ಜಿ ಬಾಂಬ್​ ಸ್ಫೋಟದಲ್ಲಿ ಟಿಎಂಸಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಪಾಂಡುವಾದಲ್ಲಿ ಟಿಎಂಸಿ ನಾಯಕ ಅಭಿಷೇಕ್​ ಬ್ಯಾನರ್ಜಿ ಸಮಾವೇಶಕ್ಕೂ ಮುನ್ನ ಜನರಲ್ಲಿ ಭಯ ಹುಟ್ಟಿಸಲು ಈ ಸ್ಫೋಟ ನಡೆಸಲಾಗಿದೆ ಎಂದು ಅವರು ಟೀಕೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಮುಂಚಿತವಾಗಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 6 =
Remember me
