ಮುಂಬೈ:ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಟ್ಯೂಷನ್ ಶಿಕ್ಷಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಮುಂಬೈನ ಕಾಶಿಮಿರಾದಲ್ಲಿ ನಡೆದಿದೆ.
ಅದೃಷ್ಟವಶಾತ್​, ಘಟನೆಯಲ್ಲಿ ಶಿಕ್ಷಕನು ಬದುಕುಳಿದಿದ್ದು ಆತನನ್ನು ರಾಜು ಠಾಕೂರ್ ಎಂದು ಗುರುತಿಸಲಾಗಿದೆ. ಕಾಶಿಮಿರಾದ ಕ್ಯಾಂಪಸ್‌ನಲ್ಲಿ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಕೋಚಿಂಗ್ ಕ್ಲಾಸ್​ನಲ್ಲಿ ಬೋಧನೆ ಮಾಡುತ್ತಿದ್ದನು. ಈ ಮಾರಣಾಂತಿಕ ದಾಳಿಯಲ್ಲಿ ಶಿಕ್ಷಕಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆತನನ್ನು ಐಸಿಯುನಲ್ಲಿ ದಾಖಲಿಸಲಾಗಿದೆ.ಇದನ್ನೂ ಓದಿ:ರೈಲು ಟಿಕೆಟ್‌ ರದ್ದುಗೊಳಿಸಲು ಹೋಗಿ 4 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡ ಹಿರಿಯ ನಾಗರಿಕಈ ಘಟನೆಯ ಸಿಸಿಟಿವಿ ವಿಡಿಯೋ ಕೂಡ ಬಯಲಿಗೆ ಬಂದಿದ್ದು, ಕಳೆದ ಗುರುವಾರ ಮಧ್ಯಾಹ್ನ 2:30 ರ ಸುಮಾರಿಗೆ, ರಾಜು ಠಾಕೂರ್ ರಸ್ತೆಬದಿಯಲ್ಲಿ ಇತರ ಹುಡುಗರೊಂದಿಗೆ ನಿಂತು ಮಾತನಾಡುತ್ತಿದ್ದಾಗ, ಒಬ್ಬ ವಿದ್ಯಾರ್ಥಿ ಬಂದು ಅವನ ಪಕ್ಕದಲ್ಲಿ ನಿಂತಿದ್ದಾನೆ. ಆದರೆ ಇದ್ದಕ್ಕಿದ್ದಂತೆ ಆರೋಪಿ ಹಿಂದಿನಿಂದ ಹರಿತವಾದ ಚಾಕು ತೆಗೆದು ರಾಜುವಿನ ಬೆನ್ನಿಗೆ ಇರಿದಿದ್ದಾನೆ. ಮೊದಲ ದಾಳಿಯ ನಂತರ ಶಿಕ್ಷಕನು ಚೇತರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿ ಮತ್ತೆ ಬೇರೆ ಕಡೆ ಚಾಕುವಿನಿಂದ ಇರಿದಿದ್ದಾನೆ.
ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ನಂತರ ಸ್ವತಃ ವಿದ್ಯಾರ್ಥಿಯೇ ಪೊಲೀಸ್ ಠಾಣೆಗೆ ಆಗಮಿಸಿದ್ದಾನೆ. ಈ ಕುರಿತು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮಾತನಾಡಿದ್ದು, ಶಿಕ್ಷಕನ ಮೇಲೆ ಹಲ್ಲೆ ಮಾಡಿದ ಹುಡುಗ ಅಪ್ರಾಪ್ತನಾಗಿದ್ದಾನೆ. ಈ ಸಂಬಂಧ ಕಾಶಿಮಿರಾ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ವಯಸ್ಕನ ವಿರುದ್ಧ ಸೆಕ್ಷನ್ 326ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಿಕ್ಷಕರ ಮೇಲಿನ ಹಲ್ಲೆಯ ಹಿಂದೆ ವಿದ್ಯಾರ್ಥಿಯ ಉದ್ದೇಶವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 9 =
Remember me
