ನವದೆಹಲಿ:ಜಪಾನ್​ನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಮೀರಾಬಾಯಿ ಚಾನು ಇಂದು ಭಾರತಕ್ಕೆ ಮರಳಿದ್ದಾರೆ. ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕ್ರೀಡಾಪಟುಗೆ ಭರ್ಜರಿ ಸ್ವಾಗತ ಸಿಕ್ಕಿದೆ.
ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳು ಮೀರಾಗೆ ಸನ್ಮಾನ ಮಾಡಿ ಸ್ವಾಗತಿಸಿದ್ದಾರೆ. ವಿಮಾನ ನಿಲ್ದಾಣದ ಸಿಬ್ಬಂದಿ ಮೀರಾಬಾಯಿ ಅವರು ನಿಲ್ದಾಣದಲ್ಲಿ ನಡೆದು ಬರುವಾಗ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿ ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಅವರು ಟ್ವಿಟ್ಟರ್​ನಲ್ಲಿ ತಮ್ಮ ಸಂತೋಷ ಹಂಚಿಕೊಂಡಿದ್ದು, ‘ಪ್ರೀತಿ ಮತ್ತು ಬೆಂಬಲದ ನಡುವೆ ಇಲ್ಲಿಗೆ ಮರಳಲು ಸಂತೋಷವಾಗಿದೆ, ತುಂಬಾ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.
#WATCH| Olympic silver medallist Mirabai Chanu receives a warm welcome as the staff at the Delhi airport cheered for her upon her arrival from#TokyoOlympicspic.twitter.com/VonxVMHmeo
— ANI (@ANI)July 26, 2021

ಬೆಳ್ಳಿ ಪದಕದೊಂದಿಗೆ ದೇಶಕ್ಕೆ ಮರಳಿದ ಮೀರಾಗೆ ವಿಶೇಷ ರಕ್ಷಣೆಯ ವ್ಯವಸ್ಥೆ ಮಾಡಲಾಗಿತ್ತು. ಅವರು ಏರ್​ಪೋರ್ಟ್​ನಿಂದ ಹೊರಗೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅನೇಕರು ಅದಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. (ಏಜೆನ್ಸೀಸ್)
ಅಕ್ಕಿ ಗಿರಣಿಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದ ಬಿಎಸ್​ವೈ; ಮಂಡ್ಯದಿಂದ ಶಿಕಾರಿಪುರದವರೆಗೆ ಯಡಿಯೂರಪ್ಪ ಜರ್ನಿ

ಮುಂಬೈ ಮಳೆಗೆ ಬಲಿಯಾದವರ ಸಂಖ್ಯೆ 164ಕ್ಕೆ ಏರಿಕೆ; ಇನ್ನೂ ಸಿಕ್ಕಿಲ್ಲ 100 ಮಂದಿಯ ಸುಳಿವು

ಮಗನ ಬೆಡ್ ಕ್ಲೀನ್ ಮಾಡಲು ಬಂದ ಅಮ್ಮನಿಗೆ ಶಾಕ್! ಅಯ್ಯಯ್ಯೋ ಇಲ್ಲಿ ನೋಡಿ ಎಂದು ವಿಡಿಯೋ ಹಂಚಿಕೊಂಡ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − four =
Remember me
