ಗುರುಗ್ರಾಮ:ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಶುಭ ಸಂದರ್ಭದಲ್ಲೂ ಸಹ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುವ ಗೀಳಿಗೆ ಬಿದ್ದು, ಹುಚ್ಚಾಟವಾಡಿರುವುದು ಬೆಳಕಿಗೆ ಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕರ ಗುಂಪೊಂದು ಕಾರಿನ ಛಾವಣಿ ಮೇಲೆ ಪಟಾಕಿ ಸಿಡಿಸುತ್ತಾ ಹೆದ್ದಾರಿಯಲ್ಲಿ ಹುಚ್ಚಾಟವಾಡಿರುವುದು ಕಂಡು ಬಂದಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಿಡಿಕಾರಿರುವ ನೆಟ್ಟಿಗರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
गुरुग्राम गैंग यह दिवाली सेलिब्रेशन नहीं, अराजकता है !!NCR मे बेखौफ कारो पर हुडदंग करने वाले इतने चालाक हैं कि गाड़ियों की नंबर प्लेट भी Hide कर दी हैpic.twitter.com/IcouxIJPJx
ಇದನ್ನೂ ಓದಿ:ಸೆಮಿಫಿನಾಲೆಯಲ್ಲೂ ಬೌಲಿಂಗ್​ ಮಾಡಲಿದ್ದಾರ ಕಿಂಗ್​ ಕೊಹ್ಲಿ; ಬೌಲಿಂಗ್ ಕೋಚ್​ ಹೇಳಿದ್ದಿಷ್ಟು
ವೈರಲ್ ಆಗಿರುವ ವಿಡಿಯೋದಲ್ಲಿ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನ ಮೇಲೆ ಪಟಾಕಿಗಳನ್ನು ಇಟ್ಟು ಗುರುಗ್ರಾಮ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿರುವುದನ್ನು ನೋಡಬಹುದಾಗಿದೆ. ಮತ್ತೊಂದೆಡೆ ಇವರ ಹುಚ್ಚಾಟವನ್ನು ಮತ್ತೊಂದು ಬದಿಯಲ್ಲಿ ಇನ್ನಿಬ್ಬರು ವಿಡಿಯೋ ಮಾಡುತ್ತಿರುವುದನ್ನು ನೋಡಬಹುದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಈ ರೀತಿಯ ಕರತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 18 =
Remember me
