ಜೈಪುರ:ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ದುಷ್ಕರ್ಮಿಗಳ ಗುಂಪೊಂದು ಹೋಟೆಲ್​ ಒಂದರ ಮೇಲೆ ಗುಂಡಿನ ದಾಳಿ ನಡೆಸಿ 50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಅಲ್ವಾರ್​ನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯ ಹೊಸ್ತಿಲಲ್ಲಿ ಈ ರೀತಿಯ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇತ್ತ ಘಟನೆಯು ಆಡಳಿತರೂಢ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಹೋಟೆಲ್​ಗೆ ಆಗಮಿಸುವ ಮುಸುಕುಧಾರಿಗಳಿಬ್ಬರು ಏಕಾಏಕಿ ಗಾಳಿಯಲ್ಲಿ ಗುಂಡು ಹಾರಿಸಲು ಶುರು ಮಾಡುತ್ತಾರೆ. ಈ ವೇಳೆ ಅಲ್ಲಿದ್ದ ಜನರು ಭಯದಿಂದ ಓಡಿ ಹೋಗಲು ಶುರು ಮಾಡಿದ್ದು, ವ್ಯಕ್ತಿಗಳಿಬ್ಬರು ಚೀಟಿ ಒಂದನ್ನು ಎಸೆದು ಪರಾರಿಯಾಗುತ್ತಾರೆ. ಬಳಿಕ ಚೀಟಿ ತೆಗೆದು ಪರಿಶೀಲಿಸಿದಾಗ ಅದರಲ್ಲಿ 50 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿರುವುದು ಕಂಡು ಬರುತ್ತದೆ.
VIDEO | "We received information of some miscreants firing at a hotel located at Telco intersection area under Alwar Sadar police station (in Rajasthan) and demanding extortion of Rs 50 lakh. After the firing, the miscreants also left a slip. A police team has been formed to nab…pic.twitter.com/fTWB41cGWD
ಇದನ್ನೂ ಓದಿ:ಬಿಜೆಪಿಯ ಇಂದಿನ ಸ್ಥಿತಿ ಚಿಂತಿಸಿ ಮಾಜಿ ಸಿಎಂ​ ಬೊಮ್ಮಾಯಿಗೆ ಹಾರ್ಟ್​ ಅಟ್ಯಾಕ್ ಆಗಿದೆ; ಕಾಂಗ್ರೆಸ್​ ಶಾಸಕ ಕೋನರೆಡ್ಡಿ ವ್ಯಂಗ್ಯ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಇಬ್ಬರು ದುಷ್ಕರ್ಮಿಗಳು ಹೋಟೆಲ್​ ಒಂದರ ಮುಂಭಾಗ ಐದು ಸುತ್ತು ಗುಂಡು ಹಾರಿಸಿದ್ದು, ನಿರ್ದಿಷ್ಟ ಅವಧಿಯೊಳಗೆ 50 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್​ ವಿರುದ್ಧ ಮುಗಿಬಿದ್ದಿರುವ ಬಿಜೆಪಿ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದ್ದು, ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ. ರಾಜಸ್ಥಾನವನ್ನು ಅಪರಾಧದ ರಾಜ್ಯವನ್ನಾಗಿಸಿದ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 7 =
Remember me
