ಇಂದೋರ್​:ಯುವತಿಯೊಬ್ಬಳ ಫೋನ್​ ಕಿತ್ತುಕೊಂಡು ಆಕೆಯನ್ನು ರಸ್ತೆಯುದ್ದಕ್ಕೂ ಎಳೆದುಕೊಂಡ ಹೋದ ಭೀಕರ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.
ಇದನ್ನೂ ಓದಿ:ನನಗೆ ನಿದ್ದೆ ಬರುತ್ತಿಲ್ಲವೆಂದು ಕಣ್ಣೀರಿಟ್ಟ ನಟ ದುಲ್ಕರ್ ಸಲ್ಮಾನ್; ಭಾನುವಾರ ರಾತ್ರಿ ವಿಡಿಯೋ ಪೋಸ್ಟ್.. ತಕ್ಷಣ ಡಿಲೀಟ್
ಯುವತಿಯನ್ನು ಪ್ರಾಂಜಲಿ ಸಿಂಗ್ ಬಘೇಲ್ ಎಂದು ಗುರುತಿಸಲಾಗಿದ್ದು, ಶಹದೋಲ್​ ಗ್ರಾಮದ ನಿವಾಸಿಯಾಗಿದ್ದಾಳೆ. ಯುವತಿಯು ರಸ್ತೆ ಬದಿ ಫೋನಿನಲ್ಲಿ ಮಾತನಾಡುತ್ತ ಹೋಗುವ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಯುವತಿಯು ಎಂದಿನಂತೆ ಲಸುಡಿಯಾದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಳು. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಯುವತಿಯು ಮೊಬೈಲ್​​ನ್ನು ಗಟ್ಟಿಯಾಗಿ ಹಿಡಿದುಕೊಂಡ ಕಾರಣ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ರಸ್ತೆಯುದ್ಧಕ್ಕೂ ಎಳೆದಿದ್ದಾರೆ.ಈ ವೇಳೆ ಯುವತಿಯು ಮೊಬೈಲ್​ನ್ನು ಕೈಬಿಟ್ಟಿದ್ದು, ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನು ಘಟನೆಯ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಮೊಬೈಲ್ ದರೋಡೆ ನಡೆಸಿದ ದುಷ್ಕರ್ಮಿಗಳು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಗಳ ವಿಚಾರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 2 =
Remember me
