ಮುಂಬೈ:ಬರೋಬ್ಬರಿ 27 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಸ್ಪರ್ಧೆ 2023ರನ್ನು ಆಯೋಜಿಸಲು ಸಿದ್ದವಾಗಿದ್ದು, ಸುಮಾರು ಎರಡೂವರೆ ದಶಕಗಳ ನಂತರ ದೇಶಕ್ಕೆ ಮರಳುತ್ತಿದೆ.
ವಿಶ್ವ ಸುಂದರಿ ಸ್ಪರ್ಧೆ 71ನೇ ಅವೃತ್ತಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲವಾದರೂ ನವೆಂಬರ್​ ತಿಂಗಳಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. 1996ರಲ್ಲಿ ಭಾರತ ಕೊನೆಯ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿತ್ತು.
ಈ ಕುರಿತು ಮಾತನಾಡಿರುವ ಮಿಸ್ ವರ್ಲ್ಡ್ ಸಂಸ್ಥೆಯ ಮುಖ್ಯಸ್ಥೆ  ಜೂಲಿಯಾ ಮೊರ್ಲೆ ಭಾರತದಲ್ಲಿ 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯ ಫಿನಾಲೆ ನಡೆಯಲಿದೆ ಎಂದು ಘೋಷಿಸಲು ನಾನು ಉತ್ಸುಕಳಾಗಿದ್ದೇನೆ. 27 ವರ್ಷಗಳ ಹಿಂದೆ ನಾನು ಭಾರತಕ್ಕೆ ಭೇಟಿ ನೀಡಿದ ಕ್ಷಣದಿಂದಲೂ ಇಲ್ಲಿಯವರೆಗೂ ಈ ದೇಶದ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿದ್ದೇನೆ.
ಇದನ್ನೂ ಓದಿ:VIDEO| ಮೆಟ್ರೋದಲ್ಲಿ ಯುವಕರ ಹುಚ್ಚಾಟ; ಕಠಿಣ ಕ್ರಮಕ್ಕೆ ಒತ್ತಾಯಿಸಿದ ನೆಟ್ಟಿಗರು
ಭಾರತದ ಅನನ್ಯ ಮತ್ತು ವೈವಿಧ್ಯಮಯ ಸಂಸ್ಕೃತಿ, ವಿಶ್ವ ದರ್ಜೆಯ ಆಕರ್ಷಣೆಗಳು ಮತ್ತು ಪ್ರಪಂಚದ ಇತರರೊಂದಿಗೆ ಹಂಚಿಕೊಳ್ಳಲು ಇನ್ನೂ ನಾವು ಕಾಯಲು ಸಾಧ್ಯವಿಲ್ಲ ಎಂದು ಮಿಸ್ ವರ್ಲ್ಡ್ ಸಂಸ್ಥೆಯ ಮುಖ್ಯಸ್ಥೆ  ಜೂಲಿಯಾ ಮೊರ್ಲೆ ಸ್ಪರ್ಧೆಯ ಕುರಿತು ಮಾಹಿತಿ ನೀಡಿದ್ದಾರೆ.
130ಕ್ಕೂ ಹೆಚ್ಚು ದೇಶಗಳ ಸ್ಪರ್ಧಿಗಳು ಭಾಗವಹಿಸುವ ಒಂದು ತಿಂಗಳ ಅವಧಿಯ ಈ ಸ್ಪರ್ಧೆಯಲ್ಲಿ, ಪ್ರತಿಭಾ ಪ್ರದರ್ಶನ, ಕ್ರೀಡೆ, ಸೇರಿದಂತೆ ಸ್ಪರ್ಧಾಳುಗಳು ಅನೇಕ ಕಠಿಣ ಸವಾಲುಗಳನ್ನು ಎದುರಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
