ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ ಇಂಡಿಯನ್​ ಪ್ರೀಮಿಯರ್ ಲೀಗ್​ನ ಮಾಜಿ ಅಧ್ಯಕ್ಷ ಲಲಿತ್​ ಮೋದಿ ಹೊಸ ಇನ್ನಿಂಗ್ಸ್​ ಆರಂಭಿಸಿದ್ದಾರೆ. 1994ರಲ್ಲಿ ವಿಶ್ವ ಸುಂದರಿ ಪಟ್ಟ ಅಂಲಕರಿಸಿರುವ ಸುಶ್ಮಿತಾ ಸೇನ್​​ ಅವರೊಂದಿಗೆ ಡೇಟಿಂಗ್ ನಡೆಸುತ್ತಿದ್ದಾರಂತೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
‘ನನ್ನ ಬೆಟರ್​ ಹಾಫ್ ಪಾಲುದಾರ’ ಎಂದು ಸುಶ್ಮಿತಾ ಸೇನ್​ ಜೊತೆಗಿನ ಕೆಲವೊಂದು ಫೋಟೋ ಹಂಚಿಕೊಂಡಿದ್ದಾರೆ. ಐಪಿಎಲ್​ ಮಾಜಿ ಚೇರ್ಮನ್​​ ಆಗಿರುವ ಲಲಿತ್ ಮೋದಿ ಸದ್ಯ ಲಂಡನ್​​ನಲ್ಲಿ ವಾಸವಾಗಿದ್ದಾರೆ.
ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ 2010ರಲ್ಲಿ ಲಲಿತ್ ಮೋದಿ ಭಾರತ ತೊರೆದಿದ್ದಾರೆ. ಸುಶ್ಮಿತಾ ಸೇನ್​​ 1994ರಲ್ಲಿ ವಿಶ್ವ ಸುಂದರಿ ಕಿರೀಟ ಧರಿಸಿದ್ದು, 1996ರಲ್ಲಿ ದಸ್ತಕ್ ಚಿತ್ರದ ಮೂಲಕ ಬಾಲಿವುಡ್​ಗೆ ಪದಾರ್ಪಣೆ ಮಾಡಿದ್ದರು.
ಇವರಿಬ್ಬರು ಮದುವೆ ಮಾಡಿಕೊಂಡಿದ್ದಾರೆಂದು ಅನೇಕ ಸಲ ಸುದ್ದಿ ಸಹ ಬಿತ್ತರಗೊಂಡಿತ್ತು. ಆದರೆ, ಇದೀಗ ಟ್ವೀಟ್ ಮೂಲಕ ಲಲಿತ್ ಮೋದಿ ಸ್ಪಷ್ಟನೆ ನೀಡಿದ್ದು, ಅವರೊಂದಿಗೆ ಡೇಟಿಂಗ್ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
Just for clarity. Not married – just dating each other. That too it will happen one day. 🙏🏾🙏🏾🙏🏾🙏🏾pic.twitter.com/Rx6ze6lrhE— Lalit Kumar Modi (@LalitKModi)July 14, 2022
Just for clarity. Not married – just dating each other. That too it will happen one day. 🙏🏾🙏🏾🙏🏾🙏🏾pic.twitter.com/Rx6ze6lrhE
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
