ಉತ್ತರಪ್ರದೇಶ: ಹಾಥರಸ್​ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಹಾಗೂ ಮಹಿಳೆಯರ ಸುರಕ್ಷತೆಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ಮೇಲೆ ಸೂಕ್ತ ಕ್ರಮಕೈಗೊಂಡು ತಕ್ಕಶಾಸ್ತಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ 1,535 ಪೊಲೀಸ್​ ಠಾಣೆಗಳಲ್ಲಿ ಮಹಿಳಾ ದೂರುಗಳಿಗೆಂದೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಮಹಿಳಾ ಸುರಕ್ಷತೆಗಾಗಿ ‘ಮಿಷನ್​ ಶಕ್ತಿ’ ಅಭಿಯಾನಕ್ಕಾಗಿ ಅವರು ಚಾಲನೆ ನೀಡಿ ಮಾತನಾಡಿದರು.
ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸುವುದು ತುಂಬ ದುಃಖಕರ ವಿಷಯ ಎಂದ ಅವರು, ಬಲರಾಮ್​ಪುರದಿಂದಲೇ ಈ ಮಿಷನ್​ ಶಕ್ತಿಗೆ ಚಾಲನೆ ಕೊಡಲು ನಿರ್ಧರಿಸಿದ್ದಾಗಿ ಹೇಳಿದರು. ಇದು ರಾಜ್ಯದ ಪ್ರತಿ ಮಹಿಳೆಗೂ ಗೌರವ ಹಾಗೂ ಸುರಕ್ಷತೆ ಖಚಿತ ಎಂಬುದಾಗಿ ಅವರು ಭರವಸೆ ನೀಡಿದರು.
ಮಿಷನ್​ ಶಕ್ತಿ ಆರು ತಿಂಗಳ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದ್ದು, ಇದಕ್ಕೆ ರಾಜ್ಯಪಾಲೆ ಆನಂದಿಬೆನ್​ ಪಟೇಲ್​ ಲಕ್ನೋದಲ್ಲಿ ಚಾಲನೆ ನೀಡಿದ್ದರೆ, ಉತ್ತರಪ್ರದೇಶದ ಬಲರಾಂಪುರದಲ್ಲಿ ಯೋಗಿ ಆದಿತ್ಯನಾಥ್​ ಚಾಲನೆ ನೀಡಿದರು. ಶರದ್​ ನವರಾತ್ರಿಯಂದು ಆರಂಭಗೊಂಡಿರುವ ಈ ಅಭಿಯಾನ ಏಪ್ರಿಲ್​ನಲ್ಲಿನ ಚೈತ್ರ ನವರಾತ್ರಿಯವರೆಗೆ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 9 =
Remember me
