ಪಟ್ನಾ:ಆಘಾತಕಾರಿ ಘಟನೆಯೊಂದರಲ್ಲಿ ಶಾಸಕರೊಬ್ಬರು ಸಾರ್ವಜನಿಕ ಪ್ರದೇಶದಲ್ಲಿ ತಮ್ಮ ಬಳಿ ಇರುವ ಪಿಸ್ತೂಲ್​ಅನ್ನು ಝಳಪಿಸುತ್ತಾ ಒಡಾಡಿರುವ ಘಟನೆ ಬಿಹಾರದ ಭಾಗಲ್‌ಪುರದ ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ಶಾಸಕ ಅವಾಜ್​ ಹಾಕಿ ದರ್ಪ ಮೆರೆದಿರುವುದು ವ್ಯಾಪಕ ಖಂಡನೆಗೆ ಗುರಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಶಾಸಕ ಗೋಪಾಲ್ ಮಂಡಲ್ ತಾವು ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದು ಒಡಾಡಿರುವ ಕುರಿತು ಪ್ರಶ್ನಿಸಿದಾಗ ತಾವು ಈಗಲೂ ಗನ್​ ಹಿಡಿದುಕೊಂಡಿದ್ದು, ಇದನ್ನು ಪ್ರಶ್ನಿಸಲು ಯಾರಿಗೂ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
I still have the pistol with me. What do u want to say? Had missed my belt and kept it in my waist but it slipped. Are you guys journalists? Yes, I will wave the pistol. Are you guys my father? Go away. (Abuses).@JduonlineMLA#GopalMandalpic.twitter.com/9U8cR8Bixc
ಇದನ್ನೂ ಓದಿ:ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ; ED ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ರಣಬೀರ್
ತಮ್ಮ ಬಳಿ ಗನ್​ ಹಿಡಿದುಕೊಂಡಿರುವುದನ್ನು ಸಮರ್ಥಿಸಿಕೊಂಡ ಶಾಸಕ ಗೋಪಾಲ್ ಬೆಲ್ಟ್​ ಸರಿಯಾಗಿ ಧರಿಸದ ಕಾರಣ ನಾನು ಪಿಸ್ತೂಲ್​ಅನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡಬೇಕಾಯಿತು. ಇದನ್ನು ಪ್ರಶ್ನಿಸಲು ನೀವು ಯಾರು ಎಂದು ಕೇಳುತ್ತಾ ಮಾಧ್ಯಮದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ವೈರಲ್​ ವಿಡಿಯೋದಲ್ಲಿ ನೋಡಬಹುದಾಗಿದೆ.
ಆ ನಂತರ ತಮ್ಮ ಹೇಳಿಕೆಗೆ ಸಮಾಜಾಯಿಷಿ ನೀಡಿದ ಶಾಸಕ ಗೋಪಾಲ್ ನನ್ನ ಪ್ರಾಣ ಬೆದರಿಕೆ ಇರುವುದರಿಂದ ರಕ್ಷಣೆಗಾಗಿ ನಾನು ಸದಾ ನನ್ನ ಜೊತೆ ಗನ್​ ಒಂದನ್ನು ಇಟ್ಟುಕೊಂಡಿರುತ್ತೇನೆ. ಒಂದು ವೇಳೆ ನನ್ನ ಮೇಲೆ ಯಾರೇ ದಾಳಿ ಮಾಡಲು ಮುಂದಾದರೂ ಅವರ ಮೇಲೆ ಗುಂಡು ಹಾರಿಸಲು ನಾನು ಹಿಂಜರಿಯುವುದಿಲ್ಲ ಎಂದು ಶಾಸಕ ಗೋಪಾಲ್​ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seven =
Remember me
