ಭುಬನೇಶ್ವರ್​:ವಿಧಾನಸಭಾ ಕಲಾಪವನ್ನು ಪ್ರಸಾರ ಮಾಡದಂತೆ ನಿಷೇಧಿಸಿ ಮಾಧ್ಯಮಗಳಿಗೆ ಒಡಿಶಾ ಸ್ಪೀಕರ್​ ನಿಷೇಧ ಹೇರಿದ್ದಾರೆ. ಕರ್ನಾಟಕದಲ್ಲೂ ವಿಧಾನಸೌಧದ ಒಳಗೆ ಟವಿ ಕ್ಯಾಮರಾಗಳನ್ನು ನಿಷೇಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಒಡಿಶಾದ ಕಾಂಗ್ರೆಸ್​ ಶಾಸಕ ಅಧೀರಜ್​ ಪಾಣಿಗ್ರಹಿ, ಮಾಧ್ಯಮಗಳಿಗೆ ಸುದ್ದಿ ನೀಡುವ ಸ್ವಾತಂತ್ರ್ಯ ನೀಡಿರುವುದು ಪ್ರಜಾಪ್ರಭುತ್ವದ ಸೌಂದರ್ಯ. ಆದರೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದರೆ ಅದು ಪ್ರಜಾಪ್ರಭುತ್ವ ಅಲ್ಲ ಎಂದಿದ್ದಾರೆ.
ಒಡಿಶಾದ ಸ್ಪೀಕರ್ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಶಾಸಕ ಅಧೀರಜ್​ ಪಾಣಿಗ್ರಹಿ ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಶುಕ್ರವಾರ (ಫೆ.14) ಸುದ್ದಿಗೋಷ್ಠಿ ನಡೆಸಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಂದಿನಂತೆ ಈ ಬಾರಿಯೂ ಮೀಡಿಯಾ ಕ್ಯಾಮರಾಗಳಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಲೋಕಸಭಾ ಮತ್ತು ರಾಜ್ಯಸಭಾ ಮಾದರಿ ಅನುಸರಿಸುವುದಾಗಿ ಹೇಳಿದ್ದರು.
ಈ ಹಿಂದಿನ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದೆ. ದೃಶ್ಯ ಮಾಧ್ಯಮದ ಕ್ಯಾಮರಾಗಳಿಗೆ ವಿಧಾನಸಭಾ ಸಭಾಂಗಣದ ಒಳಗೆ ಪ್ರವೇಶವಿಲ್ಲ. ಕಲಾಪದ ನೇರ ಪ್ರಸಾರಕ್ಕೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಕ್ಯಾಮರಾಮನ್​ಗಳಿಗೆ ವಿಧಾನಸಭೆಯ ಪಾಸ್ ನೀಡದಂತೆ ಆದೇಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eight =
Remember me
