ಗುರುಗ್ರಾಮ:ದೇಶಾದ್ಯಂತ ಮೇ 3ರವರೆಗೆ ವಿಸ್ತರಿಸಲ್ಪಟ್ಟಿರುವ ಲಾಕ್​ಡೌನ್​ ಅವಧಿ ಮುಂದುವರಿಯುವ ಬಗ್ಗೆ ಗೊಂದಲ ಮುಂದುವರಿದಿದೆ. ಇಂಥ ಸಂದರ್ಭದಲ್ಲೇ ಗುರುಗ್ರಾಮದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳ ಉದ್ಯೋಗಿಗಳು ಜುಲೈ ಕೊನೆಯವರೆಗೂ ಮನೆಯಿಂದಲೇ ಕೆಲಸ ಮಾಡುವುದು ಅನಿವಾರ್ಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗುರುಗ್ರಾಮ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಸಿಇಒ ವಿ.ಎಸ್​. ಕುಂದು, ಗುರುಗ್ರಾಮ ರಾಷ್ಟ್ರೀಯ ರಾಜಧಾನಿ ವಲಯದ ಒಂದು ಪ್ರಮುಖ ಭಾಗವಾಗಿದೆ. ಇಲ್ಲಿ ಇನ್ಫೊಸಿಸ್​, ಗೂಗಲ್​, ಜೆನ್​ಪ್ಯಾಕ್ಟ್​ ಮತ್ತು ಮೈಕ್ರೋಸಾಫ್ಟ್​ ಸೇರಿ ಹಲವು ಬಹುರಾಷ್ಟ್ರೀಯ ಐಟಿ, ಬಿಪಿಒ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಸದ್ಯದ ಪರಿಸ್ಥಿತಿ ಅವಲೋಕಿಸುವುದಾದರೆ ಈ ಕಂಪನಿಗಳ ಉದ್ಯೋಗಿಗಳು ಜುಲೈ ಕೊನೆಯವರೆಗೆ ಮನೆಯಿಂದಲೇ ಕೆಲಸ ಮಾಡುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.
ಡಿಎಲ್​ಎಫ್​ ಸೇರಿ ವಿವಿಧ ನಿರ್ಮಾಣ ಕಂಪನಿಗಳಿಗೆ ಕಟ್ಟಡ ನಿರ್ಮಾಣ ಕಾಮಗಾರಿ ಮುಂದುವರಿಸಲು ಅವಕಾಶ ನೀಡಲಾಗಿದೆ. ಆದರೆ, ಇಲ್ಲಿ ಸಾಮಾಜಿಕ ಅಂತರ ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
ಕೈಗಾರಿಕೆಗಳು ಮತ್ತು ಉತ್ಪಾದನಾ ಘಟಕಗಳ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಮನೆಯಿಂದಲೇ ಕೆಲಸ ಮಾಡುವ ನಿಯಮವನ್ನು ಪಾಲಿಸುವಂತೆ ಸೂಚಿಸಲಾಗುತ್ತಿದೆ. ಇನ್ನುಳಿದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುವುದು ಅನಿವಾರ್ಯ ಎಂದು ಹೇಳಿದ್ದಾರೆ.
ಕೋವಿಡ್​ 19ಕ್ಕೂ ಬೆದರದ ಪಾಕಿಸ್ತಾನ; ಮುಚ್ಚದ ಉಗ್ರರ ಕಾರ್ಖಾನೆ, ಲಾಂಚ್​ಪ್ಯಾಡ್​ಗಳಲ್ಲಿ ಕಿರಾತಕರ ಜಮಾವಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
