ಪಟ್ನಾ:ಚಿಪ್ಸ್​ ಹಾಗೂ ಬಿಸ್ಕೆಟ್​ಗಳನ್ನು ಕದ್ದರೆಂಬ ಶಂಕೆಯ ಮೇರೆಗೆ ಗುಂಪೊಂದು ನಾಲ್ವರು ಅಪ್ರಾಪ್ತ ಬಾಲಕರನ್ನು ಅಮಾನುಷವಾಗಿ ಥಳಿಸಿರುವ ಘಟನೆ ಬಿಹಾರದ ಬೇಗುಸರೈ ಜಿಲ್ಲೆಯ ಫಾಸಿಲ್​ಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ನಾಲ್ವರು ಬಾಲಕರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು, ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಹರಿಣಗಳ ಬಳಿಕ ಬಾಂಗ್ಲಾದೇಶಕ್ಕೂ ಸೋಲುಣಿಸಿದ ನೆದರ್ಲೆಂಡ್; ಡಚ್ಚರಿಗೆ 87 ರನ್ ಜಯ
ಈ ಕುರಿತು ಪ್ರತಿಕ್ರಿಯಿಸಿರುವ ವೀರ್​ಪುರ ಪೊಲೀಸ್​ ಠಾಣಾಧಿಕಾರಿ ಪಲ್ಲವ್​ ಕುಮಾರ್, ನಾಲ್ವರು ಬಾಲಕರು ಚಿಪ್ಸ್​ ಹಾಗೂ ಬಿಸ್ಕೆಟ್​ಗಳನ್ನು ಕದ್ದರೆಂಬ ಶಂಕೆಯ ಮೇರೆಗೆ ಅಂಗಡಿಯ ಮಾಲೀಕ ಸೇರಿದಂತೆ ಫಾಸಿಲ್​ಪುರ ಗ್ರಾಮದ ಜನರು ಅವರನ್ನು ಮನಬಂದ.ತೆ ಥಳಿಸಿದ್ದಾರೆ. ವಿಚಾರ ತಿಳಿದು ಅಧಿಕಾರಿಗಳ ತಂಡ ಒಂದು ಸ್ಥಳಕ್ಕೆ ದೌಡಾಯಿಸಿದ್ದು, ಬಾಲಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಲಾಗುವುದು. ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಘಟನೆಗೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ವೀರ್​ಪುರ ಪೊಲೀಸ್​ ಠಾಣಾಧಿಕಾರಿ ಪಲ್ಲವ್​ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seven =
Remember me
