ಕೊಲ್ಕತಾ:ಅಪ್ರಾಪ್ತ ವಯಸ್ಸಿನ ಬುಡಕಟ್ಟು ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು ಆಕ್ರೋಶ ಭರಿತರು ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದಾರೆ.
ಕಲಿಯಾಗಂಜ್​ನಲ್ಲಿ ಪ್ರತಿಭಟನಾ ನಿರತರು ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಕಳೆದ ವಾರ ಬುಡಕಟ್ಟು ಸಮುದಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಇದಕ್ಕೆ ಪೂರಕ ಎಂಬಂತೆ ಪೊಲೀಸರು ಶವವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ಇದರಿಂದ ಆಕ್ರೋಶಗೊಂಡ ಜನರು ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸ್​ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದು ಪರಿಸ್ಥಿತಿ ಬುದಿ ಮುಚ್ಚಿದ ಕೆಂಡದಂತಾಗಿದೆ. ಆದರೆ, ವೈರಲ್​ ಆಗಿರುವ ವಿಡಿಯೋದಲ್ಲಿ ಶವ ಬಾಲಕಿಯದ್ದ ಎಂಬ ಬಗ್ಗೆ ಖಚಿತ ಮಾಹಿತಿ ದೊರೆತ್ತಿಲ್ಲ.
ಇದನ್ನೂ ಓದಿ:ಅಬಕಾರಿ ನೀತಿಯಲ್ಲಿ ಅಕ್ರಮ; ಎರಡನೇ ಬಾರಿ ಆರೋಪಪಟ್ಟಿ ಸಲ್ಲಿಸಿದ ಸಿಬಿಐ
ಉತ್ತರ ದಿನಾಜ್​ಪುರ್​ ಜಿಲ್ಲೆಯ ಕಲಿಯಾಗಂಜ್​ ಪೊಲೀಸ್​ ಠಾಣೆ ಎದುರು ಆದಿವಾಸಿ ಹಾಗೂ ರಾಜ್​ಬಂಗ್​ಶಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾ ನಿರತರು ಪೊಲೀಸ್​ ಠಾಣೆಯ ಒಳ ನುಗ್ಗಿ ಬೆಂಕಿ ಹಚ್ಚಿದ್ದಾರೆ.
ಪೊಲೀಸರು ಪ್ರತಿಭಟನಾ ನಿರತರನ್ನು ಚದುರಿಸಲು ಲಾಠಿ ಚಾರ್ಜ್​ ಹಾಗೂ ಆಶ್ರುವಾಯುವನ್ನು ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ. ಆದರೆ, ಬೆಂಕಿ ನಂದಿಸುವಲ್ಲಿ ವಿಫಲರಾದೆವು ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಇನ್ನು ಪೊಲೀಸ್​ ಠಾಣೆಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿರುವ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಎಡೆ ಮಾಡಿಕೊಟ್ಟಿದ್ದು ಆಡಳಿತರೂಢ ಟಿಎಂಸಿ ಹಾಗೂ ವಿಪಕ್ಷ ಬಿಜೆಪಿ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ಬಾಲಕಿಯ ಸಾವನ್ನು ಅತ್ಯಾಚಾರ ಮತ್ತು ಕೊಲೆಯ ಪ್ರಕರಣವೆಂದು ಹೇಳುವ ಮೂಲಕ ಬಿಜೆಪಿ ಕೋಪವನ್ನು ಪ್ರಚೋದಿಸುತ್ತಿದೆ. ಜನತೆ ಇದಕ್ಕೆ ಕಿವಿಗೊಡಬಾರದು ಎಂದು ವಿನಂತಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 4 =
Remember me
