ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ತಪ್ಪಾಗಿ ರಚನೆಯಾಗಿದ್ದು ಶೀಘ್ರದಲ್ಲೇ ಅದು ಪತನವಾಗಲಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ.
ಇದನ್ನು ಓದಿ:ಇಬ್ಬರು ಮಾಜಿ ಮುಖ್ಯಮಂತ್ರಿಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ
ಮೋದಿ ಅವರಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತರ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. ಇದು ಮುಂದುವರಿಯಬೇಕೆಂದು ನಾವು ಬಯಸುತ್ತೇವೆ. ಇದರಿಂದ ದೇಶಕ್ಕೆ ಒಳ್ಳೆಯದಾಗಬೇಕು. ದೇಶವನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು. ದೇಶವನ್ನು ಬಲಪಡಿಸಲು ನಾವು ಸಹಕರಿಸುತ್ತೇವೆ ಎಂದು ಖರ್ಗೆ ಹೇಳಿದರು. ಆದರೆ ನಮ್ಮ ಪ್ರಧಾನಿಯವರಿಗೆ ಯಾವುದು ಚೆನ್ನಾಗಿ ನಡೆಯುತ್ತಿದೆಯೋ ಅದನ್ನು ಮುಂದುವರಿಸಲು ಬಿಡದ ಅಭ್ಯಾಸವಿದೆ ಎಂದು ಅವರು ಟೀಕಿಸಿದರು.
ಖರ್ಗೆಯವರು ಹೇಳಿದ್ದು ಸರಿ! ಎಂದು ಹೇಳಿರುವ ಆರ್‌ಜೆಡಿ ವಕ್ತಾರ ಏಜಾಜ್ ಅಹ್ಮದ್ ಅವರು ಜನಾದೇಶ ಮೋದಿ ಸರ್ಕಾರದ ವಿರುದ್ಧವಾಗಿತ್ತು. ಮತದಾರರು ಅವರನ್ನು ಸ್ವೀಕರಿಸಲಿಲ್ಲ. ಆದರೂ ಅವರು ಸರ್ಕಾರ ರಚಿಸಿದ್ದಾರೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಬಿಜೆಪಿ ಎನ್​​ಡಿಎ ನೇತೃತ್ವದಲ್ಲಿ ಸರ್ಕಾರ ರಚಿಸಿದೆ. ಮಿತ್ರಪಕ್ಷಗಳಾದ ಎನ್​​.ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್, ಚಿರಾಗ್ ಪಾಸ್ವಾನ್ ಮತ್ತು ಏಕನಾಥ್ ಶಿಂಧೆ ಅವರನ್ನು ಅವಲಂಬಿಸಿದೆ. ಅಲ್ಲದೆ ನರೇಂದ್ರ ಮೋದಿಯವರ ರಾಜಕೀಯ ಜೀವನದಲ್ಲಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸುತ್ತಿರುವುದು ಇದೇ ಮೊದಲು. (ಏಜೆನ್ಸೀಸ್​)
ಆಳವಾದ ಕಮರಿಗೆ ಟೆಂಪೋ ಬಿದ್ದು 8 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × five =
Remember me
