ನವದೆಹಲಿ:ಗ್ರಾಮೀಣ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ಎಂನರೇಗಾ) ನಗರ ಪ್ರದೇಶಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಕರೊನಾ ಲಾಕ್​ಡೌನ್​ನಿಂದಾಗಿ ಕೆಲಸ ಕಳೆದುಕೊಂಡಿರುವ ನಗರ ಪ್ರದೇಶಗಳ ಜನರಿಗೆ ಅನುಕೂಲ ಮಾಡುವುದು ಇದರ ಉದ್ದೇಶವಾಗಿದೆ. ಆರಂಭದಲ್ಲಿ ದೇಶದ ಸಣ್ಣ ನಗರಗಳಲ್ಲಿ ಇದನ್ನು ಅನುಷ್ಠಾನ ಗೊಳಿಸಲಾಗುತ್ತದೆ. ಅದಕ್ಕೆ ತಗಲುವ ಅಂದಾಜು 35,068 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಕುಮಾರ್ ಹೇಳಿದ್ದಾರೆ.
ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಕ್ಕೆ ತಂದಿತ್ತು. ಇದು ಜಗತ್ತಿನಲ್ಲೇ ಅತ್ಯಂತ ದೊಡ್ಡ ಉದ್ಯೋಗ ಯೋಜನೆ ಎಂಬ ಖ್ಯಾತಿ ಪಡೆದಿದೆ. ಈ ಯೋಜನೆಯನ್ವಯ ಗ್ರಾಮೀಣ ಒಳನಾಡು ಪ್ರದೇಶಗಳಲ್ಲಿ ವರ್ಷಕ್ಕೆ ಕನಿಷ್ಠ ನೂರು ದಿನ ಕೆಲಸದ ಖಾತರಿಯಿದ್ದು 202 ರೂಪಾಯಿ ಕನಿಷ್ಠ ದಿನಗೂಲಿ ನೀಡಲಾಗುತ್ತದೆ. ಕರೊನಾ ವೈರಸ್​ನಿಂದ ಆಗಿರುವ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಅದರ ನಗರ ಆವೃತ್ತಿಯನ್ನು ಅನುಷ್ಠಾನಗೊಳಿಸುವುದು ಸರ್ಕಾರದ ಗುರಿಯಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
