ಜೈಪುರ:ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಏಕೈಕ ಗುರಿ ಅಧಿಕಾರದಲ್ಲಿ ಉಳಿಯುವುದಷ್ಟೇ ಹೊರತು ಜನರ ಕಲ್ಯಾಣವಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದ ದೌಸಾ ಜಿಲ್ಲೆಯ ಸಿಕ್ರೈನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ತನ್ನ ಕೆಲವೇ ಕೆಲವು ಸ್ನೇಹಿತರ ಹಿತಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರು ರಾಜಸ್ಥಾನದಲ್ಲಿ ಅಧಿಕಾರದಲ್ಲಿದ್ದ ಸಮಯದಲ್ಲಿ ಜನರ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಎಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ಮುಖ್ಯ ಉದ್ದೇಶ ಜನರ ಕಲ್ಯಾಣವಲ್ಲ, ಅಧಿಕಾರದಲ್ಲಿರುವುದಷ್ಟೇ ಅವರ ಪರಮ ಗುರಿ. ಬಡವರ ಜೇಬಿನಿಂದ ಹಣವನ್ನು ಕದ್ದು ಅದನ್ನು ದೊಡ್ಡ ದೊಡ್ಡ ಉದ್ಯಮಿಗಳ ಕಿಸೆಗೆ ಹಾಕುವುದು ಬಿಜೆಪಿಯವರ ದೊಡ್ಡ ನೀತಿಯಾಗಿದೆ.
आप यह देखकर वोट दीजिए कि कांग्रेस सरकार ने आपके लिए कितना काम किया है, कितनी योजनाएं लेकर आई है।आपके जीवन में तरक्की लाने के लिए जो सरकार दिन-रात काम करे… उसे वोट दो, कांग्रेस को वोट दो।राजस्थान का रिवाज बदल डालो, इस बार फिर से कांग्रेस को लाओ।: राजस्‍थान के दौसा में…pic.twitter.com/h5WeJB6EQZ
ಇದನ್ನೂ ಓದಿ:ಭ್ರಷ್ಟಾಚಾರ ಪ್ರಕರಣ; ಉದ್ಯಮಿಯನ್ನು ಬೆದರಿಸಿ ನನ್ನ ವಿರುದ್ಧ ದೂರು ಕೊಡಿಸಲಾಗಿದೆ: ಸಂಸದೆ ಮಹುವಾ ಮೊಯಿತ್ರಾ
ಸೇವೆ ಮತ್ತು ಅನುಕಂಪದಿಂದ ನಾವು ರಾಜಕೀಯದಲ್ಲಿ ಸಾರ್ವಜನಿಕರ ಕಲ್ಯಾಣ ಸಾಧಿಸಲು ಸಾಧ್ಯ. ಆದರೆ, ಬಿಜೆಪಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡುವ ಬದಲು ಜಾತಿ ಹಾಗೂ ಧರ್ಮದ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ನಾಯಕ ಎನ್ನಿಸಿಕೊಂಡವನು ವರ್ತಮಾನ ಹಾಗೂ ಭವಿಷ್ಯತ್​ ಕಾಲದ ಬಗ್ಗೆ ಮಾತನಾಡುತ್ತಾನೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಚುನಾವಣೆಗೆ ಸೆಮಿಫಿನಾಲೆ ಎಂದೇ ಬಿಂಬಿತವಾಗಿದೆ. ನವೆಂಬರ್ 25ರಂದು ರಾಜಸ್ಥಾನದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 3 =
Remember me
