ನವದೆಹಲಿ:ಫ್ರಾನ್ಸ್​ನಿಂದ ಖರೀದಿಸಲಾಗಿರುವ ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್​ನ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಮಾರಂಭದ ಅಧಿಕೃತ ದಿನಾಂಕ ಇನ್ನೂ ಘೊಷಣೆಯಾಗಿಲ್ಲ. ಆಗಸ್ಟ್ ಕೊನೆ ವಾರ ಅಥವಾ ಸೆಪ್ಟೆಂಬರ್​ನ ಮೊದಲ ವಾರದಲ್ಲಿ ಅಂಬಾಲಾ ವಾಯುನೆಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ. ಈ ವೇಳೆ ವಾಯುಪಡೆಯ ಗೋಲ್ಡನ್ ಏರೋಸ್ ಸ್ಕಾ್ವಡ್ರನ್​ಗೆ ರಫೇಲ್ ವಿಮಾನಗಳನ್ನು ಸೇರ್ಪಡೆಗೊಳಿಸ ಲಾಗುತ್ತದೆ. ಕಳೆದ ಜುಲೈ 29ರಂದು ಐದು ರಫೇಲ್ ಜೆಟ್​ಗಳು ಫ್ರಾನ್ಸ್​ನಿಂದ ಭಾರತಕ್ಕೆ ಬಂದಿಳಿದಿವೆ. ಅವುಗಳ ಪ್ರಾಯೋಗಿಕ ಕಾರ್ಯಾಚರಣೆಯೂ ನಡೆಯುತ್ತಿದೆ.
ಕೇಂದ್ರ ಸರ್ಕಾರ 2016ರಲ್ಲಿ ಫ್ರಾನ್ಸ್​ನಿಂದ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ಜೆಟ್​ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. ಈ ವರ್ಷದ ಆರಂಭದಲ್ಲೇ ರಫೇಲ್ ಜೆಟ್​ಗಳ ಮೊದಲ ಬ್ಯಾಚ್ ಭಾರತಕ್ಕೆ ಬರಬೇಕಾಗಿತ್ತು. ಕರೊನಾ ಬಿಕ್ಕಟ್ಟು ಪರಿಸ್ಥಿತಿಯಿಂದಾಗಿ ಹಸ್ತಾಂತರ ಪ್ರಕ್ರಿಯೆ ವಿಳಂಬಗೊಂಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 11 =
Remember me
