ದೆಹಲಿ:2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯ ‘ಮೋದಿ ಉಪನಾಮ’ ಹೇಳಿಕೆ ಕುರಿತು ನ್ಯಾಯಾಲವು ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ ನೀಡಿದ್ದು, ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಂಸತ್‌ ಸದಸ್ಯ ಸ್ಥಾನಮಾನ ಮತ್ತೆ ಸಿಗಲಿದೆ. ಜತೆಗೆ ಕಾಂಗ್ರೆಸ್ ನಾಯಕ ಚುನಾವಣೆಗೆ ಸ್ಪರ್ಧಿಸಲು ದಾರಿ ಮಾಡಿಕೊಟ್ಟಿದೆ.ಏನಿದು ಪ್ರಕರಣ?2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸೂರತ್​ ಹೆಚ್ಚುವರಿ ನ್ಯಾಯಾಲಯ ರಾಹುಲ್​ ಗಾಂಧಿಯನ್ನು ದೋಷಿ ಎಂದು ತೀರ್ಪು 2 ವರ್ಷ ಶಿಕ್ಷೆ ಪ್ರಕಟಿಸಿತ್ತು. ಪರಿಣಾಮವಾಗಿ ರಾಹುಲ್​ರನ್ನು  ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ನಂತರ ರಾಹುಲ್  ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ಸೆಷನ್ಸ್ ನ್ಯಾಯಾಲಯವನ್ನು ಕೋರಿ, ಪ್ರಕರಣ ಇತ್ಯರ್ಥವಾಗುವವರೆಗೆ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಕೋರಿದ್ದರು. ಆದರೆ ಸೆಷನ್ಸ್ ನ್ಯಾಯಾಲಯವು ಈ ಮನವಿಯನ್ನು ಏಪ್ರಿಲ್​ನಲ್ಲಿ ತಿರಸ್ಕರಿಸಿತು. ರಾಹುಲ್ ಗಾಂಧಿ ಸಂಸದ ಮತ್ತು ದೇಶದ ಎರಡನೇ ಅತಿದೊಡ್ಡ ರಾಜಕೀಯ ಪಕ್ಷದ ಮಾಜಿ ಮುಖ್ಯಸ್ಥರಾಗಿರುವುದರಿಂದ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿತ್ತು.
ಬಳಿಕ ರಾಹುಲ್​ ಮತ್ತೆ, ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.ರಾಹುಲ್ ಗಾಂಧಿ ಮಾಡಿದ ಮನವಿಯ ತೀರ್ಪನ್ನುಗುಜರಾತ್ ಹೈಕೋರ್ಟ್ ವಜಾಗೊಳಿಸಿ, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು. ಆ ಮೂಲಕ ರಾಹುಲ್​ಗೆ ಹಿನ್ನಡೆಯುಂಟಾಗಿತ್ತು. ಕೊನೆಗೆ ತನಗೆ ವಿಧಿಸಿರುವ ಶಿಕ್ಷೆ ತಡೆಯುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯಕ್ಕೆ ಈ ರಾಹುಲ್​ ಬಿಗ್​ ರಿಲೀಫ್​​ ನೀಡಿರುವ ಸುಪ್ರೀಂ ಶಿಕ್ಷೆಗೆ ತಡೆ ನೀಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
