ವಾಷಿಂಗ್ಟನ್: ಚೀನಾ-ಭಾರತ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸುವುದಕ್ಕಾಗಿ ಮಧ್ಯಸ್ಥಿಕೆ ವಹಿಸಲು ಅಮೆರಿಕ ಮತ್ತೊಮ್ಮೆ ಪ್ರಯತ್ನ ಮಾಡಿರುವುದನ್ನು ಸ್ವತಃ ಅಧ್ಯಕ್ಷ ಟ್ರಂಪ್ ಅವರೇ ಬಹಿರಂಗಪಡಿಸಿದ್ದಾರೆ.
ಈಗಾಗಲೇ ಕೆಲವು ದಿನಗಳ ಹಿಂದೆ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಲು ಉತ್ಸುಕವಿರುವುದಾಗಿ ಅಮೆರಿಕ ಹೇಳಿತ್ತು. ಇದನ್ನು ಭಾರತ ನಯವಾಗಿಯೇ ತಿರಸ್ಕರಿಸಿತ್ತು. ಅದೇ ವಿಷಯವನ್ನು ಟ್ರಂಪ್ ಇವತ್ತಿನ ತಮ್ಮ ಸುದ್ದಿಗೋಷ್ಠಿಯಲ್ಲಿ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿರಾಜಕೀಯ ವಲಯದಲ್ಲಿ ಶುರುವಾಗಿದೆ ಚಟುವಟಿಕೆ; ತೀವ್ರ ಅಚ್ಚರಿ ಮೂಡಿಸಿದೆ ಡಿ.ಕೆ.ಸುರೇಶ್​ ಹೇಳಿಕೆ
‘‘ಚೀನಾ-ಭಾರತ ಗಡಿ ವಿವಾದ ಕುರಿತು ಮೋದಿ ಅವರೊಂದಿಗೆ ಸಂಭಾಷಣೆ ನಡೆಸಿದೆ. ಆದರೆ ಈ ಬಗ್ಗೆ ಹೆಚ್ಚು ಮಾತನಾಡಲು ಮೋದಿ ಇಷ್ಟಪಡಲಿಲ್ಲ. (ಚೀನಾಕ್ಕೆ ಸಂಬಂಧಿಸಿದಂತೆ) ಅವರು ಒಳ್ಳೆಯ ಮೂಡ್‌ನಲ್ಲಿ ಇಲ್ಲ’’ ಎಂದು ಟ್ರಂಪ್ ಹೇಳಿದರು.
ಈ ಮಧ್ಯೆ ಅಮೆರಿಕ ಮಧ್ಯಪ್ರವೇಶದ ಕುರಿತು ಮೊದಲ ಬಾರಿಗೆ ಶುಕ್ರವಾರ ಚೀನಾ ಕೂಡ ಅಧಿಕೃತ ಪ್ರತಿಕ್ರಿಯೆ ನೀಡಿದೆ. ‘‘ಈ ಗಡಿವಿವಾದವು ಚೀನಾ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವಿಷಯವಾಗಿದ್ದು, ಅಮೆರಿಕ ಮಧ್ಯಸ್ಥಿಕೆ ಅಗತ್ಯವಿಲ್ಲ’’ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಹೇಳಿದ್ದಾರೆ.
ಮುಖ್ಯಮಂತ್ರಿಯನ್ನು ಎರಡು ದಿನ ಕಾಯಿಸಿ ಸತಾಯಿಸಿದ್ದ ಯತ್ನಾಳ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
