ನವದೆಹಲಿ:ಪ್ರಕೃತಿ ವಿಕೋಪಕ್ಕೆ ಅಪಾರ ಹಾನಿಯಾದ ಕೇರಳದ ವಯನಾಡು ಜಿಲ್ಲೆಯ ಚುರಲ್ಮಲಾ ಮತ್ತು ಮುಂಡಕ್ಕ ಗ್ರಾಮಗಳಿಗೆ ಆ.10(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ:ರಿಲಯನ್ಸ್ ಇಂಡಸ್ಟ್ರೀಸ್​ನಲ್ಲಿ 42 ಸಾವಿರ ಉದ್ಯೋಗಳು ಔಟ್​! ಅಂಬಾನಿ ಕಂಪೆನಿಯಲ್ಲಿ ಏನಾಗ್ತಿದೆ? ವಿವರ ಇಲ್ಲಿದೆ..
ಪ್ರಧಾನಿ ಭೇಟಿ ಬಳಿಕ ಅವರು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಯನಾಡು ವಿಷಯದ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್, ವಯನಾಡು ಜನತೆಗೆ ಪರಿಹಾರ ಘೋಷಿಸಬೇಕು ಎಂದು ಮೋದಿ ಸರ್ಕಾರವನ್ನು ಒತ್ತಾಯಿಸಿದರು. ದುರಂತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು. ಈ ದುರಂತದಲ್ಲಿ ಹಲವು ಕುಟುಂಬಗಳು ನಲುಗಿ ಹೋಗಿದೆ. ಕೆಲವು ಸ್ಥಳಗಳಲ್ಲಿ, ಕುಟುಂಬದಲ್ಲಿ ಒಬ್ಬ ವ್ಯಕ್ತಿ ಮಾತ್ರ ಉಳಿದಿದ್ದಾರೆ. ಮನೆಯಲ್ಲಿ ಹಿರಿಯರಿಲ್ಲ, ಮಕ್ಕಳ ಪೈಕಿ ಒಬ್ಬರೇ ಉಳಿದಿದ್ದಾರೆ. ವಯನಾಡು ಜಿಲ್ಲೆಯಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದು ರಾಹುಲ್ ಗಾಂಧಿ ವಿವರಿಸಿದರು.
ಇತ್ತೀಚೆಗಷ್ಟೇ ಪ್ರಿಯಾಂಕಾ ಗಾಂಧಿ ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಯನಾಡು ಜಿಲ್ಲೆಗೆ ಭೇಟಿ ನೀಡಿದ್ದರು.
ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಸಾವಿನ ಸಂಖ್ಯೆ 417 ಕ್ಕೆ ತಲುಪಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ಇನ್ನೂ ಮುಂದುವರಿದಿದೆ. 10 ಸಾವಿರಕ್ಕೂ ಹೆಚ್ಚು ನಿರಾಶ್ರಿತರು ವಿವಿಧ ಪುನರ್ವಸತಿ ಕೇಂದ್ರಗಳಲ್ಲಿದ್ದಾರೆ.
ಚಲಿಸುವ ಕಾರಿನ ಮೇಲೆ ಪ್ರೇಮಿಗಳ ಬೆಚ್ಚಿಬೀಳಿಸುವ ದೃಶ್ಯ! ವೀಡಿಯೋ ವೈರಲ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − seventeen =
Remember me
