ಬೆಂಗಳೂರು:21 ದಿನಗಳ ಲಾಕ್​ಡೌನ್​ನ ಮೊದಲೆರಡು ದಿನ ಕರ್ನಾಟಕದ ಪರಿಸ್ಥಿತಿ ಬಗ್ಗೆ ಮಾಹಿತಿ ತರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜನರನ್ನು ಮನೆಯಲ್ಲೇ ಇರುವಂತೆ ಮಾಡಲು ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟನಿಟ್ಟಿನ ಸೂಚನೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದ ಪ್ರಧಾನಿ, ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ. ಕೊನೆಯಲ್ಲಿ ಇನ್ನಷ್ಟು ಬಿಗಿಯಾದ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಲಾಕ್​ಡೌನ್ ಹೊರತಾಗಿ ಜನರು ಇನ್ನೂ ಹೊರಗೆ ಓಡಾಡುತ್ತಿದ್ದಾರೆ. ಈ ಬೆಳವಣಿಗೆ ಸರಿಯಲ್ಲ. ಅಗತ್ಯ ವಸ್ತುವನ್ನು ಆದಷ್ಟು ಅವರಿಗೆ ಸುಲಭವಾಗಿ ಸಿಗುವಂತೆ ಮಾಡಬೇಕು, ದಿನಬಳಕೆ ವಸ್ತು ಕೊರತೆಯಾಗದಂತೆ ನೋಡಿಕೊಳ್ಳಬೇಕು, ಔಷಧ ಸಾಮಗ್ರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರಬೇಕು, ಕರೊನಾಗಾಗಿಯೇ ಪ್ರತ್ಯೇಕ ಆಸ್ಪತ್ರೆ ಸಿದ್ಧವಾಗಿ ಇಟ್ಟುಕೊಳ್ಳಬೇಕು ಎಂದು ಪ್ರಧಾನಿ ಸಲಹೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ‘ಕರ್ನಾಟಕದಲ್ಲಿ ಲಾಕ್​ಡೌನ್ ಆಗಿದ್ದರೂ ಜನ ತಮ್ಮದೇ ಆದ ರೀತಿ ಓಡಾಟ ನಡೆಸಿದ್ದಾರೆ. ಇದೆಲ್ಲವನ್ನು ಬಂದೋಬಸ್ತ್ ಮಾಡಬೇಕೆಂದು ಪ್ರಧಾನಿ ಸೂಚನೆ ಕೊಟ್ಟಿದ್ದಾರೆ. ಆ ಬಗ್ಗೆ ಬಿಗಿ ಕ್ರಮಕೈಗೊಳ್ಳಬೇಕೆಂದು ಸಂಬಂಧ ಪಟ್ಟವರಿಗೆ ತಿಳಿಸಿದ್ದೇನೆ’ ಎಂದರು.
ಉಸ್ತುವಾರಿ ಜವಾಬ್ದಾರಿ: ಜಿಲ್ಲಾ ಉಸ್ತುವಾರಿ ಸಚಿವರು ತಂತಮ್ಮ ಜಿಲ್ಲೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಸಂಪುಟ ಸಭೆಯಲ್ಲಿ ಸೂಚನೆ ಕೊಟ್ಟಿದ್ದಾರೆ. ಲಾಕ್​ಡೌನ್​ಗೆ ಮೊದಲ ಆದ್ಯತೆ ಕೊಡಬೇಕು, ಎಲ್ಲರೂ ಜವಾಬ್ದಾರಿ ನೀಡಿದ ಜಿಲ್ಲೆಯಲ್ಲಿ ಗಮನವಿಟ್ಟು ಕೆಲಸ ಮಾಡಬೇಕೆಂದು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಪೋರೇಟ್ ನೆರವು ನಿರೀಕ್ಷೆ
ಈಗಾಗಲೇ ಬೇರ್ ಎಂಬ ಅಂತರಾಷ್ಟ್ರೀಯ ಕಂಪನಿ ಉಚಿತವಾಗಿ ಔಷಧ ನೀಡಲು ಆಸಕ್ತಿ ತೋರಿದೆ. ಅದನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಶಾಸಕ ಚರಂತಿ ಮಠ ತಮ್ಮ ಸಂಸ್ಥೆಯಿಂದ 2 ಕೋಟಿ ರೂ. ನೀಡಲು ಮುಂದೆ ಬಂದಿದ್ದಾರೆ. ಕೈಗಾರಿಕೆ ಹಾಗೂ ಕಾಪೋರೇಟ್ ಕಂಪನಿಗಳು ಇನ್ನಷ್ಟು ಸಹಕಾರ ಕೊಡಲು ಮನವಿ ಮಾಡುವೆ ಎಂದರು.
ತನ್ನ ಮಗುವನ್ನೇ ಕೊಂದ 14 ವರ್ಷದ ಹುಡುಗಿಯ ಭಯಾನಕ ಕತೆ ಕೇಳಿದ್ರೆ ಶಾಕ್​ ಆಗೋದು ಗ್ಯಾರೆಂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
