ತುಮಕೂರು:ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನವನ್ನು ಬಿಜೆಪಿ ರೈತ ಮೋರ್ಚಾ ವತಿಯಿಂದ 70 ಗೋವುಗಳಿಗೆ ಪೂಜೆ ಸಲ್ಲಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಸಿದ್ಧಗಂಗಾ ಮಠದ ಆವರಣದಲ್ಲಿ ಗುರುವಾರ ಐವರು ಪ್ರಗತಿಪರ ರೈತರನ್ನು ರೈತ ಮೋರ್ಚಾ ಸನ್ಮಾನಿಸಿತು. ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೃಷಿ ಹಾಗೂ ರೈತಪರವಾಗಿ ಕಾಳಜಿ ವಹಿಸಿರುವ ಪ್ರಧಾನಿ ಮೋದಿ, ಹತ್ತಾರು ಯೋಜನೆಗಳನ್ನು ಈ ವಲಯಕ್ಕೆ ನೀಡುವ ಮೂಲಕ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ಅವರಿಗೆ ದೇವರು ಹೆಚ್ಚಿನ ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಸಿದ್ದಲಿಂಗ ಶ್ರೀಗಳು ಹೇಳಿದರು.
ಇದನ್ನೂ ಓದಿರಿಶಿರಾ ಬೈ ಎಲೆಕ್ಷನ್​ಗೆ ಕಾಂಗ್ರೆಸ್​ನಿಂದ ಉಸ್ತುವಾರಿ ನೇಮಕ
ಸೇವಾ ಸಪ್ತಾಹ:ಸೆ.17ರಿಂದ ಅ.2ರ ಗಾಂಧಿ ಜಯಂತಿವರೆಗೆ ಸೇವಾ ಸಪ್ತಾಹ ಹಮ್ಮಿಕೊಂಡಿದ್ದು, ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿರುವುದಾಗಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್​ ತಿಳಿಸಿದರು. ವಿಶ್ವ ಭೂಪಟದಲ್ಲಿ ಭಾರತಕ್ಕೆ ಉನ್ನತ ಸ್ಥಾನ ಕಲ್ಪಿಸಿಕೊಟ್ಟ ಪ್ರಧಾನಿ ಹೆಚ್ಚು ದಕ್ಷತೆ ಹಾಗೂ ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಲು ಗೋಮಾತೆ ಶಕ್ತಿ ನೀಡಲೆಂದು ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದರು. ಮೋದಿ ಆಶಯದಂತೆ ಶ್ರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು.​
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್​. ಶಿವಪ್ರಸಾದ್, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಡಾ.ಎಸ್​.ಪರಮೇಶ್, ಜಿಲ್ಲಾ ರೈತಮೋರ್ಚಾದ ಸ್ನೇಕ್​ ನಂದೀಶ್​, ತರಕಾರಿ ಮಹೇಶ್​, ಶಿವಕುಮಾರ್​, ಶೋಭಾ, ಪ್ರಿಯಾರಾಜ್​, ಜ್ಯೋತಿ ಉಪಸ್ಥಿತರಿದ್ದರು.
ಯಂತ್ರಧಾರಣೆ ಮಂಚದ ಮೇಲೆ ಮೊದಲ ಬಾರಿಗೆ ಆಸೀನರಾದ ಸಿದ್ದಲಿಂಗ ಶ್ರೀಗಳು

ಮೋದಿಗೆ ಶುಭಾಶಯ ಕೋರುತ್ತೇನೆ, ಆದರೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + four =
Remember me
