ಹೈದರಾಬಾದ್​:ಮುಂದಿನ ತಿಂಗಳು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ 45 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ಕಾಂಗ್ರೆಸ್​ ಇಂದು (ಅ.27) ಬಿಡುಗಡೆ ಮಾಡಿದೆ. ಗಮನಾರ್ಹ ಸಂಗತಿ ಏನೆಂದರೆ, ಟೀಮ್​ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್​ ಅವರಿಗೆ ಹೈದರಾಬಾದ್​ನ ಜುಬಿಲಿ ಹಿಲ್ಸ್​ ಕ್ಷೇತ್ರದಿಂದ ಟಿಕೆಟ್​ ನೀಡಲಾಗಿದೆ.
ಪಕ್ಷದ ಮಾಜಿ ಸಂಸದ ಮಧು ಗೌಡ್​ ಯಾಕ್ಸಿ ಅವರಿಗೆ ಲಾಲ್​ ಬಹದೂರ್​ ನಗರ, ಪೊನ್ನಮ್​ ಪ್ರಭಾಕರ್​ಗೆ ಹುಸನಾಬಾದ್, ಕಂಡಿ ಶ್ರೀನಿವಾಸ್​ ರೆಡ್ಡಿಗೆ ಆದಿಲಬಾದ್​, ತುಮ್ಲ ನಾಗೇಶ್ವರ್​ ರಾವ್​ಗೆ ಖಮ್ಮಮ್​ ಮತ್ತು ಕೆ. ರಾಜ್​ ಗೋಪಾಲ್​ ರೆಡ್ಡಿಗೆ ಮುನುಗೋಡ್​ ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್​ ನೀಡಿದೆ.
ಎರಡನೇ ಪಟ್ಟಿಯೊಂದಿಗೆ ಪಕ್ಷವು ಒಟ್ಟು 100 ಅಭ್ಯರ್ಥಿಗಳ ಹೆಸರನ್ನು ತೆಲಂಗಾಣ ಚುನಾವಣೆಗೆ ಘೋಷಣೆ ಮಾಡಿದೆ. ರಾಜ್ಯವು ಒಟ್ಟು 119 ಸ್ಥಾನಗಳನ್ನು ಹೊಂದಿದೆ. ಅ.15ರಂದು ಕಾಂಗ್ರೆಸ್​ 55 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು. ಕುತೂಹಲಕಾರಿ ಸಂಗತಿ ಏನೆಂದರೆ, ರಾಜ್ ಗೋಪಾಲ್ ರೆಡ್ಡಿ ಕಾಂಗ್ರೆಸ್‌ಗೆ ಮರಳಿದ್ದಾರೆ. ಬಿಜೆಪಿಗೆ ಸೇರಲು ಪಕ್ಷವನ್ನು ತೊರೆದ ಒಂದು ವರ್ಷದ ನಂತರ ಮತ್ತೆ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ನಾಯಕತ್ವವು ತೆಲಂಗಾಣ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಚರ್ಚಿಸಿ ಅಂತಿಮಗೊಳಿಸಿದೆ. ಈ ಸಭೆಯಲ್ಲಿ ಪಕ್ಷದೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಮಿತಿ ಸದಸ್ಯರು, ತೆಲಂಗಾಣದ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದರು.
ಅಂದಹಾಗೆ ನವೆಂಬರ್​ 3ರಂದು ನೋಟಿಫಿಕೆಶನ್​ ಹೊರಡಿಸುವ ಮೂಲಕ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್​ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್​ 3ಕ್ಕೆ ಫಲಿತಾಂಶ ಹೊರಬೀಳಲಿದೆ.(ಏಜೆನ್ಸೀಸ್​)
ಮಧ್ಯಪ್ರದೇಶದಲ್ಲಿ ಕತ್ತೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ: ಕಾರಣ ಕೇಳಿದ್ರೆ ಬೆರಗಾಗ್ತೀರಾ!

ಇನ್​ಫೊಸಿಸ್​ ನಾರಾಯಣಮೂರ್ತಿ ಅವರ ಆ ಮಾತು ‘ವಾರಕ್ಕೆ 70 ಗಂಟೆಗಳ ಕೆಲಸದ ನಡುವೆ’ ಕಳೆದುಹೋಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 5 =
Remember me
