ಉತ್ತರಾಖಂಡ:ಹಿಂದಿ ಕಿರುತೆರೆಯ ಖ್ಯಾತ ನಟಿ ಮೊಹೆನಾ ಕುಮಾರಿ ಸಿಂಗ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಅತ್ತೆಯಿಂದ (ಪತಿಯ ತಾಯಿ) ಸೋಂಕು ತಗುಲಿದೆ.
ಯೆ ರಿಷ್ತಾ ಕ್ಯಾ ಕೆಹಲಾತಾ ಹೈ ಧಾರಾವಾಹಿಯ ಮೂಲಕ ಮನೆ ಮಾತಾಗಿರುವ ಮೊಹೆನಾ ಕೆಲವು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತಮಗೆ ಹಾಗೂ ಕುಟುಂಬಸ್ಥರಿಗೆ ಸೋಂಕು ತಗುಲಿರುವ ಬಗ್ಗೆ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಅವರ ಪತಿ ಸುಯೇಷ್ ರಾವತ್, ಅವರ ಅತ್ತೆ, ಮಾವ ಸೇರಿದಂತೆ ಕುಟುಂಬದ ಐವರಿಗೆ ಸೋಂಕು ತಗುಲಿದ್ದು, ಎಲ್ಲರೂ ಕ್ವಾರಂಟೈನ್​ನಲ್ಲಿ ಇದ್ದಾರೆ.
ಮೊಹೆನಾ ಅವರು ಉತ್ತರಾಖಂಡ ಮೂಲದವರು. ಇಲ್ಲಿಯ ರಿಷಿಕೇಶದಲ್ಲಿರುವ ಆಸ್ಪತ್ರೆಯಲ್ಲಿ ಇಡೀ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ:ಎಲ್ಲೆಲ್ಲೂ ಹೆಣಗಳ ರಾಶಿ: ಹತ್ತಿರ ಸುಳಿಯದ ಸಂಬಂಧಿಕರು- ಚಿಕಿತ್ಸೆಗೆ ದಿನಗಟ್ಟಲೆ ಕಾಯುವ ಸ್ಥಿತಿ!
ತಮಗೆ ಸೋಂಕು ತಗುಲಿರುವ ಬಗ್ಗೆ ಇವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಅತ್ತೆಗೆ ಮೊದಲು ಜ್ವರ ಕಾಣಿಸಿಕೊಂಡಿತ್ತು. ಈಗ ಜ್ವರ ಎಂದಾಕ್ಷಣ ಮೊದಲು ತಲೆಗೆ ಹೋಗುವುದು ಕರೊನಾ ವೈರಸ್​. ಈ ಹಿನ್ನೆಲೆಯಲ್ಲಿ ಆತಕಂಕ್ಕೀಡಾದ ನಾವು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದೆವು. ಆದರೆ ನೆಗೆಟಿವ್ ವರದಿ ಬಂದಿತ್ತು. ಹೀಗಾಗಿ ನಾವು ಸಮಾಧಾನಪಟ್ಟುಕೊಂಡೆವು.
ಆದರೆ ಅತ್ತೆಯಲ್ಲಿ ಜ್ವರದ ಲಕ್ಷಣಗಳು ಕಡಿಮೆಯಾಗಲೇ ಇಲ್ಲ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಯಿತು. ಅವರ ನಿಕಟ ಸಂಪರ್ಕದಲ್ಲಿ ನಾವು ಇದ್ದ ಕಾರಣ, ನೆಗೆಟಿವ್​ ಬಂದಿದ್ದರೂ ಪುನಃ ಪರೀಕ್ಷೆ ಮಾಡಿಸಿಕೊಂಡಾಗ ಪಾಸಿಟಿವ್ ಬಂದಿತ್ತು ಎಂದಿದ್ದಾರೆ.
ಇದನ್ನೂ ಓದಿ:‘ಇಂಡಿಯಾ’ ಬೇಡ, ‘ಭಾರತ’ ಬೇಕು: ಸುಪ್ರೀಂಕೋರ್ಟ್​ನಲ್ಲಿ ಇಂದು ವಿಚಾರಣೆ
ನಾವು ಪರೀಕ್ಷೆ ಮಾಡಿಸಿಕೊಳ್ಳುವ ಸಮಯದಲ್ಲಿ ನನಗೆ, ಪತಿಗೆ ಇಬ್ಬರಿಗೂ ವೈರಸ್ ನ ಯಾವುದೇ ರೀತಿಯ ಲಕ್ಷಣಗಳೂ ಗೋಚರಿಸುತ್ತಿರಲಿಲ್ಲ. ಎಲ್ಲರೂ ಸಾಮಾನ್ಯವಾಗಿಯೇ ಇದ್ದೆವು. ಆದರೂ ಸೋಂಕು ತಗುಲಿದೆ. ನಮ್ಮ ಕುಟುಂಬದಲ್ಲಿ ನಮ್ಮ ಭಾವನವರನ್ನು ಬಿಟ್ಟು ಬಾಕಿ ಎಲ್ಲರ ವೈರದಿ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ. ಸಂಪೂರ್ಣವಾಗಿ ಗುಣಮುಖರಾಗುವರೆಗೂ ನಾವು ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇವೆ ಎಂದೂ ಹೇಳಿದ್ದಾರೆ.
ಕರೊನಾಕ್ಕಿಂತಲೂ ಭೀಕರ ವೈರಸ್​ ಜಗತ್ತನ್ನು ಕಾಡಲಿದೆಯಂತೆ! ಏನೆನ್ನುತ್ತಾರೆ ವಿಜ್ಞಾನಿಗಳು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − 2 =
Remember me
