ನವದೆಹಲಿ:ಜಾಗತಿಕ ಉಗ್ರ ನಿಗ್ರಹ ಕಣ್ಗಾವಲು ಸಂಸ್ಥೆ ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್​ಎಟಿಎಫ್) ತಂಡವು ಮುಂಬರುವ ಫೆಬ್ರವರಿ ಅಥವಾ ಮಾರ್ಚ್​ನಲ್ಲಿ ಭಾರತಕ್ಕೆ ನಾಲ್ಕನೇ ಸುತ್ತಿನ ಭೇಟಿ ನೀಡಿ ಪರೀಕ್ಷೆ ನಡೆಸುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಗಳ ಹಣದ ಹರಿವನ್ನು ಸಂಪೂರ್ಣವಾಗಿ ಮಟ್ಟಹಾಕಲು ಕೇಂದ್ರ ಸರ್ಕಾರ ಹಲವು ಪೂರ್ವಭಾವಿ ಕ್ರಮಗಳನ್ನು ಜರುಗಿಸುತ್ತಿದೆ. ಇದರ ಭಾಗವಾಗಿಯೇ ಕಾಶ್ಮೀರ ಮೂಲದ ಸ್ವಯಂಸೇವಾ ಸಂಸ್ಥೆ (ಎನ್​ಜಿಒ)ಗಳು ಮತ್ತು ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಇತರ ಸಂಘ ಸಂಸ್ಥೆಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ), ಜಾರಿ ನಿರ್ದೇಶನಾಲಯ (ಇಡಿ) ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ದಾಳಿ ನಡೆಸುತ್ತಿವೆ.
ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ನೆರವು ಹಾಗೂ ಇತರ ಚಟುವಟಿಕೆಗಳ ಮೇಲೆ ಭಾರತ ತೆಗೆದುಕೊಂಡಿರುವ ಕ್ರಮಗಳ ‘ಮ್ಯುಚುವಲ್ ಎವಲ್ಯೂಷನ್’ ವರದಿ ಸಿದ್ಧಪಡಿಸುವ ಸಲುವಾಗಿ ಎಫ್​ಎಟಿಎಫ್​ನ ತಂಡ ಭೇಟಿ ನೀಡುತ್ತಿದೆ. ‘ಮ್ಯುಚುವಲ್ ಎವಲ್ಯೂಷನ್’ ವರದಿಯು ಹಣ ಅಕ್ರಮ ವರ್ಗಾವಣೆ ಮತ್ತು ಟೆರರ್ ಫಂಡಿಂಗ್ ವಿರುದ್ಧ ಆಯಾ ದೇಶಗಳು ಕೈಗೊಂಡ ಕ್ರಮಗಳ ಮೌಲ್ಯಮಾಪನವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಯೋತ್ಪಾದನೆ ವಿರುದ್ಧ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಭಯೋತ್ಪಾದನೆಗೆ ಸಂಬಂಧಪಟ್ಟ ಎಲ್ಲ ಪ್ರಕರಣಗಳ ಚಾರ್ಜ್​ಶೀಟ್​ಗಳನ್ನು ಸಮಯಕ್ಕೆ ಅನುಗುಣವಾಗಿ ಸಲ್ಲಿಸಲು ಮತ್ತು ಪ್ರಕರಣಗಳ ವಿಚಾರಣೆ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲ ತನಿಖಾ ಏಜೆನ್ಸಿಗಳಿಗೆ ಸೂಚನೆ ನೀಡಿದೆ. ತೃಪ್ತಿದಾಕವಾಗಿ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ 2013ರಲ್ಲಿ ನಡೆದ ಎಫ್​ಎಟಿಎಫ್​ನ ಸಮಗ್ರ ಸಭೆಯಲ್ಲಿ ಭಾರತವನ್ನು ನಿಯಮಿತ ಅನುಸರಣಾ ಪ್ರಕ್ರಿಯೆಯಿಂದ ತೆಗೆದುಹಾಕಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ಭಯೋತ್ಪಾದಕ ಅಡಗುತಾಣವೊಂದನ್ನು ಪತ್ತೆ ಮಾಡಿವೆ. ಸ್ಥಳದಿಂದ ಎರಡು ಎಕೆ -47 ರೈಫಲ್​ಗಳು, 2 ಎಕೆ ಮ್ಯಾಗ್ಜಿನ್​ಗಳು, 270 ಸುತ್ತು ಗುಂಡು, ಚೀನಾ ನಿರ್ವಿುತ ಎರಡು ಪಿಸ್ತೂಲ್​ಗಳು, 10 ಡಿಟೋನೇಟರ್​ಗಳು ಮತ್ತು ಐದರಿಂದ ಆರು ಕಿಲೋಗ್ರಾಂಗಳಷ್ಟು ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ಗಂಭೀರ್ ಮುಘಲನ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಲ್ಲುಗಳಿಂದ ನಿರ್ವಿುಸಲಾದ ಉಗ್ರರ ಅಡಗುತಾಣ ಪತ್ತೆಯಾಗಿದೆ ಎಂದು ರಾಜೌರಿ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ಹೇಳಿದ್ದಾರೆ.
ಎಫ್​ಎಟಿಎಫ್​ನ ಬೂದು ಪಟ್ಟಿಗೆ ಸೇರ್ಪಡೆಯಾಗುವುದನ್ನು ತಪ್ಪಿಸಲು ಅಕ್ರಮ ಹಣ ವರ್ಗಾವಣೆ, ಟೆರರ್ ಫಂಡಿಂಗ್ ಮೇಲೆ ನಿರ್ಣಾಯಕ ಕ್ರಮಗಳನ್ನು ಕೈಗೊಂಡಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಒಂದು ವೇಳೆ ಬೂದು ಪಟ್ಟಿಗೆ ಸೇರ್ಪಡೆಯಾದರೆ ಹಣಕಾಸು ವ್ಯವಸ್ಥೆ, ವಿದೇಶಿ ಹೂಡಿಕೆಗಳಿಗೆ ಮತ್ತು ಇತರ ರಾಷ್ಟ್ರಗಳೊಂದಿಗೆ ವ್ಯಾಪಾರದ ಮೇಲೆ ಪರಿಣಾಮ ಉಂಟಾಗಲಿದೆ. ಹೀಗಾಗಿ ಈ ಪಟ್ಟಿಯಿಂದ ನಿರಂತರವಾಗಿ ಹೊರಗುಳಿಯಲು ಭಾರತ ಕಠಿಣ ಕ್ರಮ ಕೈಗೊಳ್ಳುತ್ತಿದೆ.
ಸಮಾಜ ಸೇವೆ ಹೆಸರಿನಲ್ಲಿ ಹಣ ಸಂಗ್ರಹಿಸುವ ಎನ್​ಜಿಒಗಳು ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದ ಹಿನ್ನೆಲೆ ಹಾಗೂ ಹವಾಲಾ ಮೂಲಕ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ತಂಡಗಳು ಬುಧವಾರ ದೇಶದ ವಿವಿಧೆಡೆ ದಾಳಿ ನಡೆಸಿ ಅಪಾರ ಪ್ರಮಾಣದ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − five =
Remember me
