ಅಹಮದಾಬಾದ್​:ಮೊಬಿರ್ ಜಿಲ್ಲೆಯ ಮಚ್ಚು ನದಿಗೆ ನಿರ್ಮಿಸಲಾಗಿದ್ದ ತೂಗುಸೇತುವೆ ಕುಸಿದು 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿಮಂತ್ರಿ ಘೋಷಿಸಿದ್ದಾರೆ. ಗುಜರಾತ್​ ರಾಜ್ಯ ಸರ್ಕಾರವೂ ಮೃತರ ಕುಟುಂಬಕ್ಕೆ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗುಜರಾತ್​ ಸಿಎಂ ಸಿಎಂ ಭೂಪೇಂದ್ರ ಪಟೇಲ್​, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಗುಜರಾತ್​ನಲ್ಲಿ ಇಂದು(ಸೋಮವಾರ) ನಿಗದಿಯಾಗಿದ್ದ ನರೇಂದ್ರ ಮೋದಿ ರ್ಯಾಲಿ ರದ್ದಾಗಿದೆ.
PM@narendramodihas announced an ex-gratia of Rs. 2 lakh from PMNRF for the next of kin of each of those who lost their lives in the mishap in Morbi. The injured would be given Rs. 50,000.
— PMO India (@PMOIndia)October 30, 2022

ಈ ದುರಂತದ ಜವಾಬ್ದಾರಿಯನ್ನು ಗುಜರಾತ್​ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಗುಜರಾತ್​ನ ಕಾರ್ಮಿಕ ಮತ್ತು ಉದ್ಯೋಗ ಸಚಿವ ಬ್ರಿಜೇಶ್​ ಶರ್ಮಾ ಹೇಳಿದ್ದಾರೆ.
#MorbiBridgeCollapse| Indian Army teams deployed in Morbi, Gujarat carried out search and rescue operations for survivors of the mishap. All three defence services have deployed their teams for search operations: Defence officialspic.twitter.com/tfEjCW3MhE
— ANI (@ANI)October 31, 2022

ತೂಗುಸೇತುವೆ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಾದ ಎಲ್ಲ ನೆರವು ನೀಡುವಂತೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
Gujarat | Search and rescue operations underway in Morbi where 132 people died after a cable bridge collapsed yesterday.#MorbiBridgeCollapsepic.twitter.com/uTIZiIu8Ps
— ANI (@ANI)October 31, 2022

ಭಾನುವಾರ ಸಂಜೆ 6.30ರಲ್ಲಿ ಪ್ರವಾಸಿಗರು ಸೇರಿ 500ಕ್ಕೂ ಅಧಿಕ ಮಂದಿ ಸೇತುವೆ ಮೇಲೆ ನಿಂತಿದ್ದರು. ಆಗ ಸೇತುವೆ ಕುಸಿದಿದ್ದು, 100ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿದ್ದಾರೆ. ಆರಂಭದಲ್ಲಿ ಸಾವಿನ ಸಂಖ್ಯೆ 30 ಎಂದು ಅಂದಾಜಿಸಲಾಗಿತ್ತು. ಸೋಮವಾರ ಬೆಳಗಿನಜಾವ ಬಂದ ವರದಿ ಪ್ರಕಾರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕೆಲವರು ಈಜಿ ದಡ ಸೇರಿದ್ದಾರೆ, ಕಾರ್ಯಾಚರಣೆ ನಡೆಸಿ 78ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 19 ಮಂದಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಗುಜರಾತ್​ನಲ್ಲಿ ತೂಗುಸೇತುವೆ ಕುಸಿತ: 100ಕ್ಕೂ ಹೆಚ್ಚು ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

ಹೊಸದುರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ಚೆಕ್​ ಡ್ಯಾಂಗೆ ಹಾರಿ ಪ್ರಾಣಬಿಟ್ಟ ತಾಯಿ! ಸಾವಿಗೂ ಮುನ್ನ ಆಕೆ ಮಾಡಿಟ್ಟ ವಿಡಿಯೋ ನೋಡಿದ್ರೆ ಮನಕಲಕುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 13 =
Remember me
