ಮುಂಬೈ:ಸರ್ಕಾರಿ ಅನುದಾನಿತ ವಶತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 160ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಐದರಿಂದ, 15 ವರ್ಷದೊಳಗಿನ ಮಕ್ಕಳು ಅಸ್ವಸ್ಥರಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ದೇಶದ ಭವ್ಯ ಭವಿಷ್ಯಕ್ಕಾಗಿ ಎನ್​ಡಿಎ ಮೈತ್ರಿಕೂಟ ಸೇರಿದೆ: ಅಜಿತ್​ ಪವಾರ್​
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ರಾಜಾ ದಯಾನಿಧಿ ರಾಜ್ಯ ಸರ್ಕಾರದ ಅನುದಾನಿತ ಆಶ್ರಮ ವಸತಿ ಶಾಲೆಯಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಗಳು ಆಹಾರ ಸೇವಿಸಿದ ಬಳಿಕ ತೀವ್ರ ಅಸ್ವಸ್ಥರಾಗಿದ್ದಾರೆ. 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲಿದ್ದು, ತಕ್ಷಣವೇ ಅವರನ್ನು ಜತ್​ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಕಲುಷಿತ ಆಹಾರ ಸೇವಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಜಾ ದಯಾನಿಧಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
