ನವದೆಹಲಿ:ಭಾರತದಲ್ಲಿನ ಸುಮಾರು ನಾಲ್ಕು ಸಾವಿರ ಉದ್ಯೋಗಿಗಳ ಭವಿಷ್ಯ ಆತಂಕದಲ್ಲಿದ್ದು, ಮುಂದೇನು ಎಂಬ ಚಿಂತೆ ಅವರನ್ನು ಕಾಡಲಾರಂಭಿಸಿದೆ. ಅಷ್ಟಕ್ಕೂ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಆತಂಕಕ್ಕೆ ತಳ್ಳಿರುವುದು ಅವರು ಕೆಲಸ ಮಾಡುತ್ತಿರುವ ಕಂಪನಿಯ ಒಂದೇ ಒಂದು ನಿರ್ಧಾರ.
ಫೋರ್ಡ್​ ಕಂಪನಿಯು ಭಾರತದಲ್ಲಿನ ಕಾರು ಉತ್ಪಾದಿಸುವ ಎರಡು ಘಟಕಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿರುವುದೇ ಇಷ್ಟಕ್ಕೆಲ್ಲ ಕಾರಣ. ಸನಂದ್​ ಘಟಕ ಹಾಗೂ ಚೆನ್ನೈನ ಇಂಜಿನ್​ ಹಾಗೂ ವೆಹಿಕಲ್ ಅಸೆಂಬ್ಲಿ ಪ್ಲ್ಯಾಂಟ್​ನಲ್ಲಿ ದೇಶೀಯ ಬಳಕೆಯ ಕಾರುಗಳ ಉತ್ಪಾದನೆಯನ್ನು ಕಂಪನಿ ನಿಲ್ಲಿಸಿದೆ.
ಇದನ್ನೂ ಓದಿ:ಎರಡನೇ ಮದ್ವೆಯಾಗಿ ಹೊಸ ಜೀವನದ ಕನಸು ಕಂಡಿದ್ದವಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ಯಾಗ್ ಕದ್ದು ಜೈಲುಪಾಲಾದ್ಲು…
ಹೀಗೆ ಎರಡು ಉತ್ಪಾದನಾ ಘಟಕಗಳನ್ನು ಹಠಾತ್ ಆಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದರಿಂದ ಇಲ್ಲಿ ಕೆಲಸ ಮಾಡುವ ಸುಮಾರು 4 ಸಾವಿರ ಉದ್ಯೋಗಿಗಳನ್ನು ಮುಂದೇನು ಎಂಬ ಆತಂಕದಲ್ಲಿದ್ದಾರೆ. ‘ಕಂಪನಿಯು ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ 2 ಬಿಲಿಯನ್ ಡಾಲರ್​ಗೂ ಅಧಿಕ ಹೂಡಿಕೆ ಮಾಡಿದ್ದರೂ ನಷ್ಟ ಉಂಟಾಗಿದೆ. ಮತ್ತೊಂದೆಡೆ ವಾಹನಗಳ ಮಾರಾಟದಲ್ಲೂ ನಿರೀಕ್ಷಿತ ಗುರಿ ತಲುಪಲಾಗಿಲ್ಲ’ ಎಂಬುದಾಗಿ ಫೋರ್ಡ್ ಮೋಟಾರ್ ಕಂಪನಿಯ ಸಿಎಒ ಮತ್ತು ಅಧ್ಯಕ್ಷರೂ ಆಗಿರುವ ಜಿಮ್​ ಫಾರ್ಲೆ ಸಮಜಾಯಿಷಿ ನೀಡಿದ್ದಾರೆ. (ಏಜೆನ್ಸೀಸ್)
ಭಾರತದಲ್ಲಿ ಇನ್ನು ಈ ಕಾರು ಉತ್ಪಾದನೆ ಆಗುವುದಿಲ್ಲ; ಸದ್ಯಕ್ಕೆ ಇರುವ ದಾಸ್ತಾನಷ್ಟೇ ಮಾರಾಟ!

ಸ್ನಾನಕ್ಕೆಂದು ಹೋಗಿದ್ದ ಎಂಬಿಬಿಎಸ್​ ವಿದ್ಯಾರ್ಥಿನಿ ಸಾವು; 2 ಗಂಟೆ ಬಳಿಕ ಬಾತ್​ರೂಮ್​ ಬಾಗಿಲು ಮುರಿದು ನೋಡಿದ ಮನೆಯವರಿಗೆ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
