ಸಾಂಗ್ಲಿ:ಆಹಾರ ಸೇವಿಸಿದ ಬಳಿಕ ಆಶ್ರಮ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯ ಜತ್ ತಾಲೂಕಿನ ಉಮ್ಡಿ ಗ್ರಾಮದಲ್ಲಿ ನಡೆದಿದೆ.
ಆಹಾರ ಸೇವಿಸಿದ ಬಳಿಕವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಮಡ್ಗ್ಯಾಲ್‌ನ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಉಮ್ಡಿ ಗ್ರಾಮದ ಸಮತಾ ಆಶ್ರಮ ಶಾಲೆಯಲ್ಲಿ ಸುಮಾರು 150 ರಿಂದ 200 ವಿದ್ಯಾರ್ಥಿಗಳಿದ್ದಾರೆ.
ಇದನ್ನೂ ಓದಿ:ಹೆರಿಗೆ ನೋವಿನಲ್ಲಿದ್ದ ಹೆಂಡತಿ: ಸ್ಟ್ರೆಚರ್ ಸಿಗದೇ ಗರ್ಭಿಣಿಯನ್ನು ಹೊತ್ತು ತಂದ ಗಂಡ
ಭಾನುವಾರ ಉಮಡಿ ಗ್ರಾಮದಲ್ಲಿ ಕೌಟುಂಬಿಕ ಕಾರ್ಯಕ್ರಮವಿತ್ತು. ಕಾರ್ಯಕ್ರಮದ ನಂತರ ಉಳಿದ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಸ್ವಲ್ಪ ಸಮಯದಲ್ಲೇ ವಿದ್ಯಾರ್ಥಿಗಳಿಗೆ ವಾಂತಿ, ತಲೆನೋವು ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಕೂಡಲೇ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಧಾವಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದ ಕೂಡಲೇ ಉಮ್ದಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಘಟನೆಗೆ ನಿಖರ ಕಾರಣ ತಿಳಿಯಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದು, 24 ಗಂಟೆಯೊಳಗೆ ಸಮಗ್ರ ತನಿಖೆ ನಡೆಸಿ ವಿವರವಾದ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 5 =
Remember me
