ನವದೆಹಲಿ:ದೇಶದಲ್ಲಿ ಕರೊನಾ ಅಬ್ಬರವನ್ನು ಮುಂದುವರಿಸಿದೆ. ಪ್ರತಿನಿತ್ಯ ಪತ್ತೆಯಾಗುತ್ತಿದ್ದ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆಯಾದರೂ ಸೋಂಕಿನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಮಂಗಳವಾರ ದಾಖಲೆಯ ಪ್ರಮಾಣದಲ್ಲಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಒಂದೇ ದಿನದಲ್ಲಿ 4,529 ಸೋಂಕಿತರು ಬಲಿಯಾಗಿದ್ದಾರೆ. ಇದು ಈವರೆಗಿನ ಏಕದಿನ ಸಾವಿನ ಸಂಖ್ಯೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಾಗಿದೆ. 24 ಗಂಟೆಗಳಲ್ಲಿ 2,67,334 ಮಂದಿಗೆ ಸೋಂಕು ದೃಢವಾಗಿದೆ. 3,89,851 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ ಪತ್ತೆಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದೆ. ಅದರಲ್ಲಿ 2,19,86,363 ಸೋಂಕಿತರು ಗುಣಮುಖರಾಗಿದ್ದು, 32,26,719 ಸಕ್ರಿಯ ಪ್ರಕರಣಗಳು ಬಾಕಿಯಿವೆ. ಈವರೆಗೆ ಸುಮಾರು 2,83,248 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. (ಏಜೆನ್ಸೀಸ್)
ರೇಪ್​ ಮಾಡಲು ಮುಂದಾದ ಅಪ್ಪ! ಕೊಂದು ಅಮ್ಮನೊಂದಿಗೆ ಮಲಗಿದ ಮಗಳು
ಕರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟೇ ಬಿಡ್ತಾ? ಆತಂಕಕಾರಿ‌ ಮಾಹಿತಿ ಹೊರಹಾಕಿದ ವಿಧಿ ವಿಜ್ಞಾನ ತಜ್ಞ
ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!
ಹೆಂಡತಿ, ಮಗುವನ್ನು ನೋಡುವುದಕ್ಕಾಗಿ ಬಸ್ಸನ್ನೇ ಕದ್ದ! 4 ಜಿಲ್ಲೆ ದಾಟಿದ ನಂತರ ಸಿಕ್ಕಿಹಾಕಿಕೊಂಡಿದ್ದೇ ರೋಚಕ


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
